ಮೇ 4ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 02: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಬೆಳಗ್ಗೆ ಬಿಸಿಲಿನ ವಾತಾವರಣವಿರಲಿದ್ದು, ಸಂಜೆಯಷ್ಟೊತ್ತಿಗೆ ಮಳೆಯಾಗಲಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ರಾಮಗಿರಿ, ಬೆಳಗಾವಿ, ಅಜ್ಜಂಪುರ, ಸಿದ್ದಾಪುರ, ಸಾಗರ, ಶಿವಮೊಗ್ಗ, ಮೊಳಕಾಲ್ಮೂರು, ಬಂಡೀಪುರದಲ್ಲಿ ಮಳೆಯಾಗಿದೆ.

ರಾಜ್ಯದ ಹಲವೆಡೆ ಮಳೆ, ಸಿಡಿಲು ಬಡಿದು ನಾಲ್ವರ ಸಾವು

ರಾಜ್ಯದ ಹಲವೆಡೆ ಮಳೆ, ಸಿಡಿಲು ಬಡಿದು ನಾಲ್ವರ ಸಾವು

ಸಿಡಿಲು ಬಡಿದು ಕಲಬುರಗಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಬೀದರ್ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಅಫ್‌ಜಲ್‌ಪುರ ತಾಲೂಕಿನ ಬದಡಾಳ ಗ್ರಾಮದ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಭೋಜರಾಜ ಅತನೂರು(54) ಹೊಲದಲ್ಲಿ ಕೃಷಿ ಚಟುವಟಿಕೆ ಮಾಡುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಔರಾದ್ ತಾಲೂಕಿನ ಗ್ರಾಮದಲ್ಲಿ ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಅನಿತಾ ಬಸಯ್ಯಸ್ವಾಮಿ(35) ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಹೊಲ ಒಂದರಲ್ಲಿ ಶನಿವಾರ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ, 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+