ಮುಂದಿನ 2 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು, ಡಿಸೆಂಬರ್ 14: ಮುಂದಿನ ಎರಡು ದಿನ ರಾಜ್ಯದ ದಕ್ಷಿಣ ಒಳನಾಡಿನ 10 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ.

ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.

ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದ ಬಹುತೇಕ ಕಡೆ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮಳೆ ಮುಂದುವರೆದಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒಳಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಬಂಗಾಳಕೊಲ್ಲಿಯಿಂದ ಈಶಾನ್ಯ ಮಾರುತಗಳು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಬೀಸುವ ಸಾಧ್ಯತೆಯಿದೆ. ಸೋಮವಾರ ತಮಿಳುನಾಡಿನಲ್ಲಿ ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಈ ಅವಧಿಯಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 25.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆ ರಾಜ್ಯದ ಒಂದೆರಡು ಕಡೆಗಳಲ್ಲಿ ಬಹಳ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
 ಕನಿಷ್ಠ ಉಷ್ಣಾಂಶ ಎಲ್ಲಿ ದಾಖಲು?

ಕನಿಷ್ಠ ಉಷ್ಣಾಂಶ ಎಲ್ಲಿ ದಾಖಲು?

ದಾವಣಗೆರೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

    ದೇವೇಗೌಡರ ಬಗ್ಗೆ ಇಲ್ಲೂ ಇಲ್ಲದ ಅಭಿಮಾನ ಪಂಜಾಬ್ ರೈತರಿಗಿದೆ...ಹೇಗೆ ಅಂತೀರಾ? | Oneindia Kannada
     ಚಳಿ ಹೆಚ್ಚಳ

    ಚಳಿ ಹೆಚ್ಚಳ

    ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದೆ, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲು ಜಿಲ್ಲೆಗಳಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ವರೆಗೂ ತಾಪಮಾನ ದಾಖಲಾಗುತ್ತಿದೆ ಇದರ ಜೊತೆ ದಿನವವಿಡೀ ಮೋಡ ಕವಿದ ವಾತಾವರಣದಿಂದಾಗಿ ಜನರು ಚಳಿಯಿಂದ ಮನೆಗೆ ಹೊರಗೆ ಬರದಂತೆ ಆಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಕಡಿಮೆಯಾಗಿದ್ದರೂ, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ, ಮತ್ತೊಂದು ಕಡೆ ಬೆಂಗಳೂರಿನ ಬಹುತೇಕ ಭಾಗಗಲ್ಲಿ ಮಳೆಯ ಸಿಂಚನ ಆಗುತ್ತಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+