ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 19: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಏಪ್ರಿಲ್ 23ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಅಷ್ಟೇ ಅಲ್ಲದೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್, 22.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿರುವ ಪ್ರದೇಶಗಳು

ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿರುವ ಪ್ರದೇಶಗಳು

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಭಾಗಮಂಡಲ, ಶಿವಮೊಗ್ಗ, ಉತ್ತರ ಕನ್ನಡ, ಕಳಸ, ಹುಂಚದಕಟ್ಟೆ, ಚಾಮರಾಜನಗರದಲ್ಲಿ ಮಳೆಯಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Recommended Video

    ಬಸ್‌ಗೆ ಕಲ್ಲು ಹೊಡೆದು ಹಾನಿ ಮಾಡಿದವರು ಅನಾಗರಿಕರು ಎಂದ ಕೋಡಿಹಳ್ಳಿ ಚಂದ್ರಶೇಖರ್‌ | Oneindia Kannada
    ಉತ್ತರ ಒಳನಾಡಿನಲ್ಲಿ ಮಳೆ

    ಉತ್ತರ ಒಳನಾಡಿನಲ್ಲಿ ಮಳೆ

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳು, ಉತ್ತರ ಒಳನಾಡಿನ ಧಾರವಾಡ, ಹಾವೇರಿಯಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮುಂದಿನ ಮೂರು ದಿನಗಳ ಕಾಲ ಮೋಡಕವಿದ ವಾತಾವರಣ ಮುಂದುವರೆಯಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+