ಡಿಸೆಂಬರ್ 17ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು, ಡಿಸೆಂಬರ್ 15: ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು, ಮದ್ದೂರು, ರಾಯಲ್ಪಾಡು, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ. ಡಿ. 17ರವರೆಗೆ ರಾಜಸ್ಥಾನ, ಗುಜರಾತ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿಗಿಂತ ಕಡಿಮೆಯಿರುತ್ತದೆ. ಮುಂದಿನ 4 ದಿನಗಳವರೆಗೆ ಒಡಿಶಾ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಬೆಳಗಿನ ಸಮಯದಲ್ಲಿ ಮಂಜು ಇರಲಿದೆ. ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶ, ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 2 ದಿನಗಳಿಂದ ತುಂತುರು ಮಳೆಯಾಗಿದ್ದು, ಇಂದು ಕೂಡ ಮಳೆ ಸುರಿಯುವ ಸಾಧ್ಯತೆಗಳಿವೆ. ಜೂನ್ ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಚಳಿಗಾಲ ಬಂದರೂ ಇನ್ನೂ ಮಳೆ ಮುಂದುವರೆದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 4 ದಿನ ತಮಿಳುನಾಡು-ಪುದುಚೇರಿ, ಕಾರೈಕಲ್, ಕೇರಳ- ಮಾಹೆ, ಲಕ್ಷದ್ವೀಪ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತು ಆಂಧ್ರಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ 4 ದಿನ ಕಾಶ್ಮೀರ, ಲಡಾಖ್, ಗಿಲ್ಗಿಟ್ ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್​ನಲ್ಲಿ ಮಳೆಯಾಗಲಿದೆ. ಡಿಸೆಂಬರ್ 16 ಮತ್ತು 17ರಂದು ಹಿಮಾಚಲ ಪ್ರದೇಶದ ಮೇಲೆ ಮಳೆಯಾಗುವ ನಿರೀಕ್ಷೆಯಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 24.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 24.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದಲ್ಲಿ ಮುಂದಿನ 24 ಗಂಟೆ ರಾಜ್ಯದ ಒಂದೆರಡು ಕಡೆಗಳಲ್ಲಿ ಬಹಳ ಮಳೆಯಾಗುವ ಸಾಧ್ಯತೆ ಇದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
 ಕನಿಷ್ಠ ಉಷ್ಣಾಂಶ ಎಲ್ಲಿ ದಾಖಲು?

ಕನಿಷ್ಠ ಉಷ್ಣಾಂಶ ಎಲ್ಲಿ ದಾಖಲು?

ಬೀದರ್ ಹಾಗೂ ದಾವಣಗೆರೆಯಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಚಳಿ ಪ್ರಮಾಣ ಹೆಚ್ಚಳ

ಚಳಿ ಪ್ರಮಾಣ ಹೆಚ್ಚಳ

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲು ಜಿಲ್ಲೆಗಳಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ವರೆಗೂ ತಾಪಮಾನ ದಾಖಲಾಗುತ್ತಿದೆ ಇದರ ಜೊತೆ ದಿನವವಿಡೀ ಮೋಡ ಕವಿದ ವಾತಾವರಣದಿಂದಾಗಿ ಜನರು ಚಳಿಯಿಂದ ಮನೆಗೆ ಹೊರಗೆ ಬರದಂತೆ ಆಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಕಡಿಮೆಯಾಗಿದ್ದರೂ, ಬಿಟ್ಟು ಬಿಟ್ಟು ಮಳೆಯಾಗುತ್ತಿದೆ, ಮತ್ತೊಂದು ಕಡೆ ಬೆಂಗಳೂರಿನ ಬಹುತೇಕ ಭಾಗಗಲ್ಲಿ ಮಳೆಯ ಸಿಂಚನ ಆಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+