ಏಪ್ರಿಲ್ 26ರವರೆಗೆ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿ ಏಪ್ರಿಲ್ 26ರವರೆಗೂ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆ ಸುರಿಯಲಿದೆ.
ಕಲಬುರಗಿಯಲ್ಲಿ ಅತಿ ಗರಿಷ್ಠ ಅಂದರೆ 41.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ
ಕಾರ್ಕಳ, ಹುಂಚದಕಟ್ಟೆ, ಶೃಂಗೇರಿ, ಸಿದ್ದಾಪುರ, ಹಿರೆಕೆರೂರು, ಹೆಸರಘಟ್ಟ, ನೆಲಮಂಗಲ, ಮಾಗಡಿ, ಕಂಪ್ಲಿ, ತ್ಯಾಗರ್ತಿಯಲ್ಲಿ 1 ಸೆಂ.ಮೀನಷ್ಟು ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ಬೆಂಗಳೂರಿನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಳಾಗಿದೆ. ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನ ಯಾವ ಪ್ರದೇಶದಲ್ಲಿ ಮಳೆ
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
Recommended Video

ಉತ್ತರ ಒಳನಾಡಿನ ಎಲ್ಲೆಲ್ಲಿ ಮಳೆ
ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಬರುವ ಸಾಧ್ಯತೆ ಇದೆ. ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.












Click it and Unblock the Notifications