• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಏಪ್ರಿಲ್ 26ರವರೆಗೆ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

|

ಬೆಂಗಳೂರು, ಏಪ್ರಿಲ್ 22: ರಾಜ್ಯದಲ್ಲಿ ಏಪ್ರಿಲ್ 26ರವರೆಗೂ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿಜಯಪುರ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆ ಸುರಿಯಲಿದೆ.

ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

ಕಲಬುರಗಿಯಲ್ಲಿ ಅತಿ ಗರಿಷ್ಠ ಅಂದರೆ 41.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ

ಎಲ್ಲೆಲ್ಲಿ ಮಳೆಯಾಗಿದೆ

ಕಾರ್ಕಳ, ಹುಂಚದಕಟ್ಟೆ, ಶೃಂಗೇರಿ, ಸಿದ್ದಾಪುರ, ಹಿರೆಕೆರೂರು, ಹೆಸರಘಟ್ಟ, ನೆಲಮಂಗಲ, ಮಾಗಡಿ, ಕಂಪ್ಲಿ, ತ್ಯಾಗರ್ತಿಯಲ್ಲಿ 1 ಸೆಂ.ಮೀನಷ್ಟು ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಳಾಗಿದೆ. ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನ ಯಾವ ಪ್ರದೇಶದಲ್ಲಿ ಮಳೆ

ದಕ್ಷಿಣ ಒಳನಾಡಿನ ಯಾವ ಪ್ರದೇಶದಲ್ಲಿ ಮಳೆ

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

  ' ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಯಶಸ್ವಿ, ಕೊರೊನಾ ರೂಲ್ಸ್ ಬ್ರೇಕ್ ಮಾಡೋ ಆಸ್ಪತ್ರೆಗಳ ವಿರುದ್ದ ಕೇಸ್' ಸಚಿವ ಬೊಮ್ಮಾಯಿ ಮಾಹಿತಿ | Oneindia
  ಉತ್ತರ ಒಳನಾಡಿನ ಎಲ್ಲೆಲ್ಲಿ ಮಳೆ

  ಉತ್ತರ ಒಳನಾಡಿನ ಎಲ್ಲೆಲ್ಲಿ ಮಳೆ

  ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಬರುವ ಸಾಧ್ಯತೆ ಇದೆ. ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.

  English summary
  Rainfall Will Continue Till April 26 In More Than 17 Districts Of Karnataka,Rain,thundershowers very likely to occur at isolated places over the State.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X