ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಡಿ.3ರವರೆಗೆ ಮಳೆ
ಬೆಂಗಳೂರು, ನವೆಂಬರ್ 29: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಐಎಂಡಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕವು ತಿಂಗಳಿಗೆ 292 ರಷ್ಟು ಹೆಚ್ಚುವರಿ ಮಳೆಯನ್ನು ಪಡೆದಿದೆ. ಈ ವಿಪರೀತ ಮಳೆಯು ಭಾರೀ ಪ್ರವಾಹವನ್ನು ಉಂಟುಮಾಡುತ್ತದೆ, ಇದು ಜೀವಹಾನಿ ಮತ್ತು ಆಸ್ತಿ ಹಾನಿಗೆ ಕಾರಣವಾಗುತ್ತದೆ ಎನ್ನಲಾಗಿದೆ. ಈಶಾನ್ಯ ಮಾನ್ಸೂನ್ನಿಂದ ದಕ್ಷಿಣ ಕರ್ನಾಟಕ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.
ಕಳೆದ ಬಾರಿ ಇದೇ ರೀತಿಯ ಪರಿಸ್ಥಿತಿ ನವೆಂಬರ್ 2015ರಲ್ಲಿ ಚೆನ್ನೈ ಮತ್ತು ತಮಿಳುನಾಡಿನ ಇತರ ಹಲವು ಪ್ರದೇಶಗಳಲ್ಲಿ ಇದೇ ರೀತಿಯ ವಿಪರೀತ ಮಳೆಗೆ ಸಾಕ್ಷಿಯಾಗಿತ್ತು. ನವೆಂಬರ್ 29ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗಲಿದೆ. ಇಂದು ಮತ್ತು ನಾಳೆ ದಕ್ಷಿಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇಂದು ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಅಭಿವೃದ್ಧಿಯಾದರೆ ಮುಂದಿನ ವಾರಾಂತ್ಯದ ವೇಳೆಗೆ ಪೂರ್ವ ಕರಾವಳಿ ರಾಜ್ಯಗಳಾದ ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಅಪಾಯ ಎದುರಾಗಬಹುದು. ನವೆಂಬರ್ 29 ಮತ್ತು 30ರಂದು ಅಂಡಮಾನ್ ಮತ್ತು ನಿಕೋಬಾರ್ ಮೇಲೆ ಪ್ರತ್ಯೇಕವಾದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಲಡಾಖ್ ಮತ್ತು ಅರುಣಾಚಲ ಪ್ರದೇಶ ಈ ವಾರಾಂತ್ಯದಲ್ಲಿ ಪ್ರತ್ಯೇಕ ಮಳೆ/ ಹಿಮವನ್ನು ಕಾಣಬಹುದು. ದೇಶದ ಇತರೆಡೆ ಯಾವುದೇ ಮಹತ್ವದ ಮಳೆಯ ಮುನ್ಸೂಚನೆ ಇಲ್ಲ. ದೇಶದಾದ್ಯಂತ ರಾತ್ರಿಯ ಕನಿಷ್ಠವು ಸಾಮಾನ್ಯಕ್ಕಿಂತ ಸರಾಸರಿ ಅಥವಾ ಬೆಚ್ಚಗಿರುತ್ತದೆ.
ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನಾವು ನೀಡಿಲ್ಲ. ನಮ್ಮ ಪ್ರಕಾರ ಅಲ್ಲಲ್ಲಿ ಅಲ್ಪಸ್ವಲ್ಪ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದ ಮಳೆಯಾಗಬಹುದು, 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕನಿಷ್ಠ ಉಷ್ಣಾಂಶ ದಾಖಲಾಗಿರುವುದೆಲ್ಲಿ?
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ,ಉತ್ತರ ಒಳನಾಡಿನಲ್ಲಿ ಒಣಹವೆ ವರದಿಯಾಗಿದೆ, ಧಾರವಾಡದಲ್ಲಿ 12.9 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ವಾತಾವರಣ ಹೇಗಿರಲಿದೆ?
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ತಮಿಳುನಾಡಿಗೆ ಹೈ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆ ಮುಂದುವರೆದಿದ್ದು, ರಾಜಧಾನಿ ಚೆನ್ನೈನ ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಅಂತೆಯೇ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಚೆನ್ನೈ ಮತ್ತು ದಕ್ಷಿಣದ ಜಿಲ್ಲೆಗಳು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಶುಕ್ರವಾರ ಮತ್ತು ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ, ರಸ್ತೆಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಸೋಮವಾರ ಬೆಳಿಗ್ಗೆ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ತಿಳಿಸಿದೆ.











Click it and Unblock the Notifications