ಮಾರ್ಚ್ 30ರವರೆಗೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು, ಮಾರ್ಚ್ 26: ಕರ್ನಾಟಕ 7 ಜಿಲ್ಲೆಗಳಲ್ಲಿ ಮಾರ್ಚ್ 30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಗುರುವಾರ ಹಲವೆಡೆ ಮೋಡಕವಿದ ವಾತಾವರಣವಿದ್ದು, ಪುತ್ತೂರು, ಮುಂಡಗೋಡು, ಮಂಚಿಕೆರೆ,ಕಾರವಾರ, ಕದ್ರ, ಸುಬ್ರಹ್ಮಣ್ಯದಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ

ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ

ಕಲಬುರಗಿಯಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಹಾಗೆಯೇ ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಲಿರುವ ಜಿಲ್ಲೆಗಳು

ಮಳೆಯಾಗಲಿರುವ ಜಿಲ್ಲೆಗಳು

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರು ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನೊಷ್ಠ ಉಷ್ಣಾಂಶ, ಇನ್ನು ಕೆಐಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಗುರುವಾರ ಹಲವೆಡೆ ಮೋಡಕವಿದ ವಾತಾವರಣವಿದ್ದು, ಪುತ್ತೂರು, ಮುಂಡಗೋಡು, ಮಂಚಿಕೆರೆ,ಕಾರವಾರ, ಕದ್ರ, ಸುಬ್ರಹ್ಮಣ್ಯದಲ್ಲಿ ಮಳೆಯಾಗಿದೆ.ಮುಂದಿನ 48 ಗಂಟೆ ರಾಜ್ಯದಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ರಾಜ್ಯದ ಹಲವೆಡೆ ಮಾರ್ಚ್ 30ರವರೆಗೂ ಮಳೆಬರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+