ಡಿಸೆಂಬರ್ 12ರಂದು ರಾಜ್ಯದ 7 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು, ಡಿಸೆಂಬರ್ 12: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೆವಿ ಚಂಡಮಾರುತ ಅಪ್ಪಳಿಸಿದೆ. ಇದರ ಪ್ರಭಾವ ಇನ್ನೂ ಒಂದು ದಿನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಮುಸುಕಿದ ವಾತಾವರಣವಿದೆನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಕರ್ನಾಟಕದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿ. 12ರವರೆಗೂ ಮಳೆ ಸುರಿಯಲಿದೆ ಎನ್ನಲಾಗಿದೆ. ಬೀದರ್‌ನಲ್ಲಿ 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಲಿರುವ ಪ್ರದೇಶಗಳು
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿ. 12ರವರೆಗೂ ಮಳೆಯಾಗುವ ಸಾಧ್ಯತೆಯಿದೆ.

ಬೇರೆ ರಾಜ್ಯಗಳಲ್ಲೂ ಮಳೆ
ಇಂದಿನಿಂದ 2 ದಿನ ಸಿಕ್ಕಿಂ, ಮಹಾರಾಷ್ಟ್ರದ ಕರಾವಳಿ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಕರ್ನಾಟಕದ ಕರಾವಳಿ ತೀರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಾಗಿರುವ ಪ್ರದೇಶಗಳು
ಶಿವಮೊಗ್ಗ, ಭದ್ರಾವತಿ, ಲಕ್ಕವಳ್ಳಿ, ಚಿಕ್ಕಮಗಳೂರಿನ ಕಳಸ, ಕೊಪ್ಪ, ಲಕ್ಕವಳ್ಳಿ, ಮಂಗಳೂರು, ವಿಟ್ಲ, ಪಣಂಬೂರು ಮುಂತಾದ ಕಡೆಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇಂದು ಕೂಡ ಕರಾವಳಿ, ಮಲೆನಾಡು, ಕೊಡಗು, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಬೆಂಗಳೂರಿನ ವಾತಾವರಣ ಹೇಗಿದೆ.
ಬೆಂಗಳೂರಿನಲ್ಲಿ ಇಂದು ಗರಿಷ್ಠ 28 ಹಾಗೂ ಕನಿಷ್ಟ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದ್ದು, ಚಳಿ ಹೆಚ್ಚಾಗಲಿದೆ. ಜೊತೆಗೆ ತುಂತುರು ಮಳೆಯೂ ಸುರಿಯು ಸಾಧ್ಯತೆ ಇರುವುದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು. ಅದರಂತೆ ಇಂದು ಸಂಜೆಯ ಬಳಿಕ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.











Click it and Unblock the Notifications