ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 24 ಗಂಟೆಯಲ್ಲಿ ಮಳೆ ನಿರೀಕ್ಷೆ

ಬೆಂಗಳೂರು, ಅಕ್ಟೋಬರ್ 1: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕಳೆದ ಒಂದು ವಾರದಿಂದ ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಿದ್ದು, ಮುಂದಿನ 48 ಗಂಟೆ ವಿವಿಧೆಡೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ.

ಬಂಗಾಳಕೊಲ್ಲಿಯಲ್ಲಿ ವಾತಾವರಣ ಬದಲಾವಣೆ

ಬಂಗಾಳಕೊಲ್ಲಿಯಲ್ಲಿ ವಾತಾವರಣ ಬದಲಾವಣೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾತಾವರಣದ ಬದಲಾವಣೆಯಿಂದಾಗಿ ಮೋಡ ಕವಿದ ವಾತಾವರಣ ಹಾಗೂ ಮಳೆಯಾಗುತ್ತಿದ್ದು, ಇನ್ನು ಎರಡು ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದರು.

ನೈಋತ್ಯ ಮುಂಗಾರು ಮರಳುವ ಪ್ರಕ್ರಿಯೆ

ನೈಋತ್ಯ ಮುಂಗಾರು ಮರಳುವ ಪ್ರಕ್ರಿಯೆ

ನೈರುತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಬೇಕಿದ್ದು, ಇನ್ನೆರಡು ವಾರದಲ್ಲಿ ಮುಂಗಾರು ಮಾರುತಗಳು ಮರಳಲಿವೆ. ಈಶಾನ್ಯ ಮಾರುತ ಆರಂಭವಾಗಲಿದೆ. ಪರ್ವ ಕಾಲದಲ್ಲಿ ಒಂದು ವಾರ ಕಾಲ ಮಳೆ ಕಡಿಮೆಯಾಗುವ ಸಾಧ್ಯತೆಗಳಿವೆ.

ಅಕ್ಟೋಬರ್ 2ರವರೆಗೂ ಮಳೆ ಮುಂದುವರೆಯಲಿದೆ ಆದರೆ ಇಂದಿನಿಂದ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂದು ಹೇಳಿದರು.
ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಮದ್ದೂರು, ಚನ್ನಪಟ್ಟಣ, ಹೊಸಕೋಟೆ , ಚಿಂತಾಮಣಿ, ಕೊಟ್ಟೂರು, ಗೌರಿಬಿದನೂರು, ಬಂಗಾರಪೇಟೆ, ಎಲೆಕ್ಟ್ರಾನಿಕ್ ಸಿಟಿ, ಕೋಲಾರ, ಚಳ್ಳಕೆರೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ಮಳವಳ್ಳಿ, ಮಂಗಳೂರು,ಮಾಲೂರು, ತೊಂಡೆಭಾವಿ, ದೊಡ್ಡಬಳ್ಳಾಪುರ, ರಾಮನಗರ, ಬಾಗೇಪಲ್ಲಿ, ಗುಡಿಬಂಡೆ, ಆಗುಂಬೆ, ಸಂತೆಬೆನ್ನೂರು, ಗಂಗಾವತಿ, ನೆಲಮಂಗಲ, ಕೊಳ್ಳೇಗಾಲ, ಶಿರಾ, ಪಾವಗಢದಲ್ಲಿ ಮಳೆಯಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರುಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+