ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 3ರವರೆಗೆ ರಾಜ್ಯದಲ್ಲಿ ಭಾರಿ ಮಳೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

|
Google Oneindia Kannada News

ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಜೂನ್ 3ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 5 ದಿನ ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರುಮುಂದಿನ 5 ದಿನ ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರು

ರಾಯಚೂರಿನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಬಹುತೇಕ ಮೋಡಕವಿದ ವಾತಾವರಣವಿರಲಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನೈಋತ್ಯ ಮುಂಗಾರು

ನೈಋತ್ಯ ಮುಂಗಾರು

ನೈರುತ್ಯ ಮುಂಗಾರು ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ಬೀದರ್‌, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಪೂರ್ವ ಮಳೆ

ಮುಂಗಾರು ಪೂರ್ವ ಮಳೆ

ಕರಾವಳಿ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕಾಗಿದ್ದು, ಸೋಮವಾರ ಹಲವೆಡೆ ಭಾರಿ ಮಳೆ ಆಗಿದೆ. ರಾಜ್ಯಕ್ಕೆ ಒಂದೆರೆಡು ದಿನ ವಿಳಂಬವಾಗಿ ಜೂ.5 ಅಥವಾ 6ರಂದು ಪ್ರವೇಶವಾಗಲಿದೆ. ಈ ಬಾರಿ ಮೇ 31ಕ್ಕೆ ಮುಂಗಾರು ಆಗಮನವಾಗಲಿದೆ ಎಂದು ಆರಂಭದಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರೂ, ಬಳಿಕ ದಿನಾಂಕವನ್ನು ಪರಿಷ್ಕರಿಸಿ ಜೂ.3ಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಕಾರವಾರ, ಸುಬ್ರಹ್ಮಣ್ಯ, ಕುಂದಾಪುರ, ಆಗುಂಬೆ, ಕೊಟ್ಟಿಗೆಹಾರ, ಚಿಂತಾಮಣಿ, ಕದ್ರ, ಸಿದ್ದಾಪುರ, ಮಾಣಿ, ಸುಳ್ಯ, ಬಂಗಾರಪೇಟೆ, ತೀರ್ಥಹಳ್ಳಿ, ಅಂಕೋಲಾ, ಭಟ್ಕಳ, ಹೊನ್ನಾವರ, ಕಡೂರಿನಲ್ಲಿ ಮಳೆಯಾಗಿದೆ.

English summary
Meteorological department predicted that Rainfall Will Occur At Many Places Of Karnataka Till June 3, Yellow Alert Issued For 17 Districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X