ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 16ರವರೆಗೂ ಮಳೆ

|
Google Oneindia Kannada News

ಬೆಂಗಳೂರು, ಆಗಸ್ಟ್ 12:ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ದಲ್ಲಿ ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ.

ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ ಮುಂಗಾರು ಕ್ಷೀಣಗೊಂಡಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ.

ಈ ಅವಧಿಯಲ್ಲಿ 553 ಮಿಲಿ ಮೀಟರ್ ವಾಡಿಕೆ ಮಳೆಯಾಗಿದ್ದು, 536 ಮಿಲಿ ಮೀಟರ್‍ನಷ್ಟು ಮಾತ್ರ ಮಳೆ ಬಿದ್ದ ವರದಿಯಾಗಿದೆ. ಆದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದೆ.

 ರಾಜ್ಯದಲ್ಲಿ ಮುಗಿದಿಲ್ಲ ಮಳೆಯ ಅಬ್ಬರ, ಆಗಸ್ಟ್ 15ರವರೆಗೂ ಭಾರಿ ಮಳೆ ನಿರೀಕ್ಷೆ ರಾಜ್ಯದಲ್ಲಿ ಮುಗಿದಿಲ್ಲ ಮಳೆಯ ಅಬ್ಬರ, ಆಗಸ್ಟ್ 15ರವರೆಗೂ ಭಾರಿ ಮಳೆ ನಿರೀಕ್ಷೆ

Rainfall Will Occur In Coastal And South Interior Districts Of Karnataka Till August 16

ಹವಾ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ ಮುಂದು ವರಿಯಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದರು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಆ.1 ರಿಂದ 10ರ ನಡುವಿನ ಅವಧಿಯಲ್ಲಿ 83 ಮಿಲಿ ಮೀಟರ್ ವಾಡಿಕೆ ಪ್ರಮಾಣದ ಮಳೆಯಾಗಿದ್ದು, ಕೇವಲ 48 ಮಿಮೀನಷ್ಟು ಮಾತ್ರ ಮಳೆಯಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜೂನ್ 1 ರಿಂದ ಆ.10ರ ನಡುವಿನ ಅವಧಿಯಲ್ಲೂ ರಾಜ್ಯದಲ್ಲಿ ಶೇ.3ರಷ್ಟು ಮಳೆ ಕೊರತೆ ಕಂಡುಬಂದಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಆದರೆ, ಸದ್ಯಕ್ಕೆ ಭಾರೀ ಮಳೆಯಾಗುವ ಯಾವುದೇ ಮುನ್ಸೂಚನೆಗಳಿಲ್ಲ. ಹೀಗಾಗಿ ಯಾವುದೇ ರೀತಿಯ ಎಚ್ಚರಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೇವಲ ಕರ್ನಾಟಕ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇಂದಿನಿಂದ ವ್ಯಾಪಕ ಮಳೆಯಾಗಲಿದೆ. ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ.

 ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ

ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ 2-3 ದಿನಗಳಿಂದ ಮತ್ತೆ ಸಾಧಾರಣ ಮಳೆಯಾಗುತ್ತಿದ್ದು, ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ , ಮಲೆನಾಡು, ಕೊಡಗು ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಆ. 13ರಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಕವಿದ ವಾತಾವರಣವಿರಲಿದೆ. ಸಂಜೆಯ ವೇಳೆಗೆ ಬೆಂಗಳೂರಿನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ.

 ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆ ಬರುವ ನಿರೀಕ್ಷೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.
ಎಚ್‌ಎಎಲ್‌ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recommended Video

Sachin Tendulkar ಜೊತೆ ಆ ರೀತಿ ನಡೆದುಕೊಂಡಿದ್ದಕ್ಕೆ ಭಾರತೀಯರಿಗೆ ಹೆದರಿದ್ದ ಪಾಕ್ ವೇಗಿ | Oneindia Kannada
 ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ

ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ

ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಬೆಂಗಳೂರಿನಲ್ಲೂ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

 ಪ್ರವಾಹದಿಂದಾಗಿ ಮೃತಪಟ್ಟವರೆಷ್ಟು?

ಪ್ರವಾಹದಿಂದಾಗಿ ಮೃತಪಟ್ಟವರೆಷ್ಟು?

ಈ ವರ್ಷದ ಪ್ರವಾಹದಲ್ಲಿ ಕರ್ನಾಟಕದ 14 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ ಸೇರಿ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ನಷ್ಟ ಉಂಟಾಗಿದೆ.

ಇನ್ನು, ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ. ಮಳೆಯ ಹೊಡೆತಕ್ಕೆ 10,538 ಮನೆಗಳು ಹಾನಿಯಾಗಿವೆ. ವಿದ್ಯುತ್ ಕಂಬಗಳು, ಸೇತುವೆಗಳು ಮುರಿದು ಬಿದ್ದು ಕೋಟ್ಯಂತರ ರೂ. ನಷ್ಟವಾಗಿದೆ. ಹಲವಾರು ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ.

English summary
Meteorological department predicted that, Rainfall Will Occur In Coastal And South Interior Districts Of Karnataka Till August 16,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X