ಮುಂದಿನ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ

ಬೆಂಗಳೂರು, ಸೆಪ್ಟೆಂಬರ್ 15: ಮುಂದಿನ 2 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಕೂಡ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ.

ಇನ್ನು ಮೂರು ದಿನಗಳವರೆಗೂ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಲಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜಲಾಶಯಗಳ ಒಳ ಹರಿವು ಹೆಚ್ಚಳವಾಗಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕಿನಲ್ಲಿ ಭರ್ಜರಿ ಮಳೆಯಾಗುತ್ತಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಹಾರ, ದೆಹಲಿ, ಒಡಿಶಾ ಹಾಗೂ ಮಹಾರಾಷ್ಟ್ರದಲ್ಲಿ ಈಗಾಗಲೇ ಅಧಿಕ ಮಳೆಯಾಗುತ್ತಿದೆ.

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದೆ. ಇನ್ನು ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು. ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ಹೆಚ್ಚಿದೆ. ಆಗಾಗ ಬಿಸಿಲು ಮೂಡುತ್ತಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಕರಾವಳಿ ಹಾಗೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ವ್ಯಾಪಕ ಮಳೆಯಾಗಿದೆ. ತುಮರಿ, ಕೊಲ್ಲೂರು, ಸಿದ್ದಾಪುರ, ಕದ್ರಾ, ಕ್ಯಾಸಲ್ ರಾಕ್, ಅಗುಂಬೆ, ಗೋಕರ್ಣ, ಅಂಕೋಲಾ, ಯಲ್ಲಾಪುರ, ಜಾನ್ಮನೆ, ಲೋಂಡಾ, ಕಲಬುರಗಿ, ಹುಂಚದಕಟ್ಟೆ, ತೀರ್ಥಹಳ್ಳಿ, ತಾಳಗುಪ್ಪ, ಮಡಿಕೇರಿ, ಹೊನ್ನಾವರ, ಶಿರಾಲಿ, ಕುಮಟಾ, ಸುಳ್ಯ, ಮಾಣಿ, ಪುತ್ತೂರು, ನಿಪ್ಪಾಣಿ, ಬೀದರ್, ನಾಪೋಕ್ಲು, ಮಸ್ಕಿ, ಗಂಗಾವತಿ, ಹಾಸನ, ತ್ಯಾಗರ್ತಿ, ಕಿರವತ್ತಿ, ಬನವಾಸಿ, ಮಂಗಳೂರು, ಇಳಕಲ್, ಕೆಂಭಾವಿ, ಕಕ್ಕೇರಿ, ನಾರಾಯಣಪುರ, ಬಸವನ ಬಾಗೇವಾಡಿ, ದೇವರಹಿಪ್ಪರಗಿ, ಆನವಟ್ಟಿ, ಹೊಳೆ ಹೊನ್ನೂರು, ಸೊರಬದಲ್ಲಿ ಮಳೆಯಾಗಿದೆ.

 ವಿವಿಧ ರಾಜ್ಯಗಳಲ್ಲಿ ಮಳೆ

ವಿವಿಧ ರಾಜ್ಯಗಳಲ್ಲಿ ಮಳೆ

ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ಕರಾವಳಿ ಕರ್ನಾಟಕ, ಕೇರಳ, ಮರಾಠವಾಡ, ಪೂರ್ವ ರಾಜಸ್ಥಾನ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಬಹುದು ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಲಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಬೈ, ಥಾಣೆ, ವಾರ್ಧಾ, ಪಾಲ್ಗಾರ್, ಸಿಂಧುದುರ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಮಹಾರಾಷ್ಟ್ರದಲ್ಲಿ ಹಾಗೂ ಕೊಂಕಣ ಪ್ರದೇಶದಲ್ಲಿ ಮಳೆ ತೀವ್ರತೆ ಹೆಚ್ಛಾಗುವುದಾಗಿ ಇಲಾಖೆ ತಿಳಿಸಿದೆ. ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಹಾರಾಷ್ಟ್ರದ ರಾಯಗಢದಲ್ಲಿ ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
 ಎಲ್ಲೆಲ್ಲಿ ಮಳೆ

ಎಲ್ಲೆಲ್ಲಿ ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಕೂಡ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+