ನವೆಂಬರ್ 28ರವರೆಗೆ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಮುಂದುವರಿಕೆ

ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ನಿರಂತರವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ, ರಾಜ್ಯದಲ್ಲಿ ಒಂದೆಡೆ ಕೆರೆ-ಕಟ್ಟೆಗಳು ಒಡೆಯುತ್ತಿದ್ದಾರೆ, ಇದರಿಂದ ಸೃಷ್ಟಿಯಾದ ಅವಾಂತರಗಳಿಂದ ಜನಸಾಮಾನ್ಯರ ಸಹನೆ ಕಟ್ಟೆ ಒಡೆದಿದೆ.

ಬೆಂಗಳೂರಿನಲ್ಲಿ ರಸ್ತೆ ಉದ್ದಕ್ಕೂ ನೀರು ಮನೆಯಲ್ಲಿ ನೀರು ಅಂಗಡಿ ಮುಂಗಟ್ಟುಗಳಲ್ಲಿ ನೀರು ಅಪಾರ್ಟ್ಮೆಂಟ್ ಗಳಲ್ಲಿ ನೀರು ಹೀಗೆ ಹಗಲಿರುಳು ನೀರಿನಲ್ಲೇ ಕಾಲ ಕಳೆಯುವ ಅನಿವಾರ್ಯತೆ ಸೃಷ್ಟಿಯಾಗಿದ್ದು ನಿನ್ನೆ ಸಂಜೆಯಿಂದ ಸುರಿದ ಮಳೆಯಂತೂ ನಗರದ ಜನರ ಬದುಕನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ತಕ್ಷಣಕ್ಕೆ ನಿಲ್ಲುವ ಸಾಧ್ಯತೆಗಳು ಗೋಚರಿಸುತ್ತಿಲ್ಲ. ಈಗಾಗಲೇ ಮಳೆ ಹಾಗೂ ನೆರೆಹಾವಳಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತ ಬೆಳೆ ಸಂಪೂರ್ಣ ನಾಶವಾಗಿದೆ. ಹೀಗಾಗಿ ತರಕಾರಿ ಬೆಲೆಗಳು ಗಗನಕ್ಕೇರಿವೆ. ಈ ತಿಂಗಳ 29ರವರೆಗೂ ಮಳೆ ಮುಂದುವರಿಯಲಿದೆ.

ನ. 29 ರಾಜ್ಯಕ್ಕೆ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರು, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಪ್ರಸ್ತುತ ಸುರಿಯುತ್ತಿರುವ ಮಳೆ ನ. 25ರವರೆಗೆ ಕ್ಷೀಣಿಸಲಿದ್ದು, ರಾಜ್ಯಕ್ಕೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ.

ರಾಜ್ಯದ ಹಲವೆಡೆ ಸುರಿದ ಮಳೆಯಿಂದಾಗಿ ಇದುವರೆಗೆ 24 ಮಂದಿ ಸಾವನ್ನಪ್ಪಿದ್ದಾರೆ. 1600ಕ್ಕೂ ಹೆಚ್ಚು ಮನೆಗಳು ಹಾನಿಗೀಡಾಗಿವೆ. ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಮತ್ತಿತರರ ಜಿಲ್ಲೆಗಳಲ್ಲಿ ಲಕ್ಷಾಂತರ ಪ್ರದೇಶದಲ್ಲಿ ಬೆಳೆಯಲಾದ ಬೆಳೆಗಳು ನೀರು ಪಾಲಾಗಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

2200ಕಿಮೀ ರಸ್ತೆಗಳು ಹಾನಿಗೀಡಾಗಿವೆ. 125ಶಾಲಾ ಕಟ್ಟಡಗಳು,39 ಸಾರ್ವಜನಿಕ ಕೇಂದ್ರಗಳು ಹಾನಿಗೀಡಾಗಿವೆ. 658 ಮನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. 8495ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ವಾಯುಭಾರ ಕುಸಿತದ ಪರಿಣಾಮ ಹುಬ್ಬಳ್ಳಿ, ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಬೀದರ್, ಬಳ್ಳಾರಿ ಜಿಲ್ಲೆಗಳಲ್ಲೂ ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ಮಳೆಯಾಗಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಉಪ್ಪಿನಂಗಡಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಳೆಹೊನ್ನೂರು, ಸರಗೂರು, ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಅರಕಲಗೂಡು, ಸಾಲಿಗ್ರಾಮ, ಮಾಣಿ, ಸಿಂದಗಿ, ಹಾರಂಗಿ, ಸೋಮವಾರಪೇಟೆ, ಕೊಪ್ಪ, ಕೋಣನೂರು, ಬಂಟವಾಳ, ಧರ್ಮಸ್ಥಳ, ಪುತ್ತೂರು, ಸುಬ್ರಹ್ಮಣ್ಯ, ಗದಗ, ಶಿರಹಟ್ಟಿ, ದೇವರಹಿಪ್ಪರಗಿ, ನಾಪೊಕ್ಲು, ತೀರ್ಥಹಳ್ಳಿ, ಜಯಪುರ, ಬಸವಕಲ್ಯಾಣ, ಬೇಲೂರು, ಹಾಸನ, ಬಂಡೀಪುರ, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು, ತುಮಕೂರಿನಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶ ಇರಲಿದ್ದು ಕ್ರಮೇಣ ಮೋಡ ಆವರಿಸಿಕೊಳ್ಳಲಿದೆ. ಕೆಲವು ಕಡೆ ಚದುರಿದ ಮಳೆಯಾಗಲಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ರಾಜ್ಯದ ವಾತಾವರಣ

ರಾಜ್ಯದ ವಾತಾವರಣ

ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

 ಅತಿ ಕನಿಷ್ಠ ಉಷ್ಣಾಂಶ

ಅತಿ ಕನಿಷ್ಠ ಉಷ್ಣಾಂಶ

ದಾವಣಗೆರೆಯಲ್ಲಿ 19.3 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+