Karnataka Rain alert : ಬೆಂಗಳೂರು ಸೇರಿ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಭರ್ಜರಿ ಮಳೆ; ಸಂಪೂರ್ಣ ಮಾಹಿತಿ

ಬೆಂಗಳೂರು, ಮಾರ್ಚ್‌ 19: ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಅಬ್ಬರ ಆರಂಭವಾಗುತ್ತಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವರ್ಷಾಧಾರೆ ಆರಂಭವಾಗಿದ್ದು, ಬಿರು ಬಿಸಿಲಿನಿಂದ ರೋಸಿ ಹೋಗಿದ್ದ ಜನರು ಮಳೆಯ ಆಗಮನದಿಂದಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23 ರಿಂದ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇನ್ನೂ ಈಗಾಗಲೇ ಮೈಸೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

Rainfall Will occur in more than 12 districts of Karnataka from March 23

ಮುಂದಿನ ಐದು ದಿನಗಳ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಎಂಎಂ ಹಿಲ್ಸ್, ಎಚ್ಡಿಕೋಟೆ, ಬಂಡೀಪುರ, ಸರಗೂರು, ಹುಣಸೂರು, ಮದ್ದೂರಿನಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು & ನಾಳೆ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ದಿನಗಳಲ್ಲಿ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿ ಇರಲಿದೆ ಎಂದು ಹವಾಮಾನ ಇಲಾಖೆಯೂ ತಿಳಿಸಿದೆ. ಅಲ್ಲದೇ ಮುಂದಿನ 3 ಗಂಟೆಗಳಲ್ಲಿ ಧಾರವಾಡ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+