ರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಸುರಿಯಲಿದೆ ಭಾರಿ ಮಳೆ

ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ಸೆಪ್ಟೆಂಬರ್ 12ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸೆ.8ರ ವರೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಇಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದಿನ 4 ದಿನ ಮಳೆ

ರಾಜ್ಯದಲ್ಲಿ ಮುಂದಿನ 4 ದಿನ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಮುಂದಿನ 4 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಸೆ. 8ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಆಲರ್ಟ್‌ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಮಾತ್ರವಲ್ಲದೆ ಒರಿಸ್ಸಾ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಛತ್ತೀಸ್‌ಗಢದಲ್ಲೂ ವಿಪರೀತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕದ ಕರಾವಳಿ ತೀರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೊ ಆಲರ್ಟ್‌ ನೀಡಲಾಗಿದೆ. ಸೆ.8ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸೆ.10 ಮತ್ತು 11ರಂದು ಕರಾವಳಿ ಜಿಲ್ಲೆಗಳಿಗೆ ಮಾತ್ರ ಎಲ್ಲೊಅಲರ್ಟ್‌ ನೀಡಲಾಗಿದೆ.

Recommended Video

    ಪಾಕ್ ವಿರುದ್ಧ ಪ್ರತಿಭಟನೆ ಮಾಡಿದ ಆಫ್ಘನ್ ಮಹಿಳೆಯರ ಮೇಲೆ ತಾಲಿಬಾನಿಗಳಿಂದ ಗುಂಡಿನ ದಾಳಿ | Oneindia Kannada
    ಎಲ್ಲೆಲ್ಲಿ ಮಳೆಯಾಗಿದೆ?

    ಎಲ್ಲೆಲ್ಲಿ ಮಳೆಯಾಗಿದೆ?

    ಹೊನ್ನಾವರ, ಮಂಕಿ, ಭಟ್ಕಳ, ಆಗುಂಬೆ, ಕಾರ್ಕಳ, ಸಿದ್ದಾಪುರ, ಕುಂದಾಪುರ, ಸುಬ್ರಹ್ಮಣ್ಯ, ಶಿರಾಲಿ, ಅಂಕೋಲಾ, ದೇವರಹಿಪ್ಪರಗಿ, ಕಾರವಾರ, ತಾಳಗುಪ್ಪ, ಬೀದರ್, ಬ್ರಹ್ಮಾವರ, ಧರ್ಮಸ್ಥಳ, ಮುಲ್ಕಿ, ಮುನ್ನಳ್ಳಿ, ಕೆಂಭಾವಿ, ಅಗ್ರಹಾರ, ಕೋಣಂದೂರು, ಲಿಂಗನಮಕ್ಕಿ, ಸಾಗರ, ಕೊಟ್ಟಿಗೆಹಾರ, ಭಾಗಮಂಡಲ, ಮಡಿಕೇರಿ, ಪಣಂಬೂರು, ಸುಳ್ಯ, ಬೆಳ್ತಂಗಡಿ, ಬಸವನ ಬಾಗೇವಾಡಿ, ಅಡಕಿ, ನಾಪೋಕ್ಲು, ಮಂಡಗದ್ದೆ, ಪೊನ್ನಂಪೇಟೆ, ಶ್ರೀಮಂಗಲ, ಹುಂಚದಕಟ್ಟೆ, ಹಡಗಲಿಯಲ್ಲಿ ಮಳೆಯಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+