ರಾಜ್ಯಾದ್ಯಂತ ಮುಂದಿನ 4 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 25: ರಾಜ್ಯಾದ್ಯಂತ ಮುಂದಿನ 4 ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡದಲ್ಲಿ ಮಳೆಯಾಗಲಿದೆ.

ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಂದು ಸಿಲಿಕಾನ್ ಸಿಟಿಯ ಹಲವೆಡೆ ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಉದ್ಯಾನನಗರಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ.

ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ.27 ಹೆಚ್ಚು ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ ಹೆಚ್ಚಾದೆ. ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲ ದಿನಗಳಿಂದ ಕೊಚ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರ ತನಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಹಲವು ದಿನಗಳಿಂದ ಉಷ್ಣಾಂಶ ಹೆಚ್ಚಿದ್ದ, ಬೆಂಗಳೂರು ನಗರದಲ್ಲಿ ಕಳೆದ ಕೆಲದ ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಕೆರೂರು, ಕಲಬುರಗಿ, ಕಾರ್ಕಳ, ಬ್ರಹ್ಮಾವರ, ಕಾರವಾರ, ಭಟ್ಕಳ, ಬೀದರ್, ಕಮ್ಮರಡಿ, ಕೊಲ್ಲೂರು, ಕಂಪ್ಲಿ, ಚಿಂಚೋಳಿ, ಬೆಳ್ತಂಗಡಿ, ಕುಂದಾಪುರ, ಶಿರಾಲಿ, ಅಂಕೋಲಾ, ಹುಮ್ನಾಬಾದ್, ಜಾಲಹಳ್ಳಿ, ಲಿಂಗನಮಕ್ಕಿ, ತುಮ್ರಿ, ಮುಲ್ಕಿ, ದೇವರಹಿಪ್ಪರಗಿ, ಹೊನ್ನಾವರ, ಗಂಗಾವತಿ, ಕುಷ್ಟಗಿ, ಶಿರಹಟ್ಟಿ, ಕೆಂಭಾವಿ, ವಿಜಯಪುರ, ಹಾವೇರಿ, ಕೆಜಿಎಫ್, ಎಲೆಕ್ಟ್ರಾನಿಕ್‌ಸಿಟಿ, ಗೋಪಾಲನಗರ, ಭಾಗಮಂಡಲ, ಮಡಿಕೇರಿ, ಹಡಗಲಿ, ಚಿತ್ರದುರ್ಗ, ಶೃಂಗೇರಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್‌ಎಎಲ್‌ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯಾಗಬಹುದು?

ಎಲ್ಲೆಲ್ಲಿ ಮಳೆಯಾಗಬಹುದು?

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡದಲ್ಲಿ ಮಳೆಯಾಗಲಿದೆ.

ಇನ್ನುಳಿದಂತೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಮೋಡಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.
 ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಾತಾವರಣ

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಾತಾವರಣ

ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+