ರಾಜ್ಯದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 30: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 2 ರಿಂದ 4ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಗೋವಾ, ಗುಜರಾತ್, ಮಧ್ಯ ಮಹಾರಾಷ್ಟ್ರ, ಕೊಂಕಣ, ಪಶ್ಚಿಮ ಬಂಗಾಳ, ಒರಿಸ್ಸಾ, ಮರಾಠವಾಡ, ಸೌರಾಷ್ಟ್ರ, ಕಚ್, ಮಧ್ಯಪ್ರದೇಶ, ವಿದರ್ಭ, ಛತ್ತೀಸ್​ಗಢ, ಜಾರ್ಖಂಡ್, ಆಂಧ್ರಪ್ರದೇಶದ ಕರಾವಳಿ ತೀರ, ತೆಲಂಗಾಣ, ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡು, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಅಂಡಮಾನ್ ನಿಕೋಬಾರ್, ತ್ರಿಪುರ, ಮಿಜೋರಾಂ, ಅರುಣಾಚಲ ಪ್ರದೇಶ, ಬಿಹಾರ, ಉತ್ತರಾಖಂಡ, ರಾಜಸ್ಥಾನ, ಹರಿಯಾಣ, ತಮಿಳುನಾಡು, ಪುದುಚೆರಿ, ಕೇರಳ, ಮಾಹೆಯಲ್ಲಿ ಇಂದು ಅತ್ಯಂತ ಹೆಚ್ಚು ಮಳೆಯಾಗಲಿದೆ.

ಎರಡು ದಿನಗಳಲ್ಲಿ ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯುವ ಸಾಧ್ಯತೆಯಿದೆ. ಈ ಶಾಹೀನ್ ಚಂಡಮಾರುತದ ಹೆಸರನ್ನು ಕತಾರ್ ನೀಡಿದೆ. ಗುಲಾಬ್ ಚಂಡಮಾರುತದ ಅಬ್ಬರ ತೆಲಂಗಾಣ, ಮರಾಠವಾಡ, ವಿದರ್ಭದಲ್ಲಿ ಕಡಿಮೆಯಾಗುತ್ತಿದೆ.

ಇಂದಿನಿಂದ ಈ ಚಂಡಮಾರುತದ ಅಬ್ಬರ ಸಂಪೂರ್ಣ ಕಡಿಮೆಯಾಗಲಿದ್ದು, ಸೆ. 30ರ ವೇಳೆಗೆ ಇದೇ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ರೂಪ ತಳೆಯಲಿದೆ.

ಗುಲಾಬ್ ಚಂಡಮಾರುತದ ಅಬ್ಬರ ಆಂಧ್ರಪ್ರದೇಶ, ಒರಿಸ್ಸಾ, ತೆಲಂಗಾಣ, ಗುಜರಾತ್​ನಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕ ಸೇರಿ ದೇಶಾದ್ಯಂತ ಮಳೆ ಕಡಿಮೆಯಾಗಲಿದೆ ಎನ್ನಲಾಗಿತ್ತು. ಆದರೆ, ಈ ಚಂಡಮಾರುತ ಅರಬ್ಬಿ ಸಮುದ್ರದತ್ತ ತೆರಳಿದ್ದು, ಅಲ್ಲಿ ಶಾಹೀನ್ ಚಂಡಮಾರುತದ ರೂಪ ತಳೆದು ಮತ್ತೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಸೆ. 30ರ ವೇಳೆಗೆ ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದಿದೆ.

ಗುಲಾಬ್ ಚಂಡಮಾರುತದ ಅಬ್ಬರ ಕೊಂಚ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಶಾಹೀನ್ ಚಂಡಮಾರುತ ಅಪ್ಪಳಿಸಲು ಸಿದ್ಧವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತವೇ ಅರಬ್ಬಿ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಮರುರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1ರಂದು ಶಾಹೀನ್ ಚಂಡಮಾರುತ ಅಪ್ಪಳಿಸಲಿದ್ದು, ಭಾರತದ ಪೂರ್ವ ಹಾಗೂ ಪಶ್ಚಿಮ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.

ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಶಾಹೀನ್ ಚಂಡಮಾರುತದ ಪರಿಣಾಮದಿಂದ ಶುಕ್ರವಾರ ವಿಪರೀತ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಈ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಇರಲಿದೆ. ಆದರೆ, ಗುಜರಾತ್ ಕರಾವಳಿ ತೀರದಲ್ಲಿ ಇದರ ಪರಿಣಾಮ ಹೆಚ್ಚಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗುಲಾಬ್ ಚಂಡಮಾರುತ ಶಾಹೀನ್ ಚಂಡಮಾರುತದ ರೂಪ ತಳೆದು ಮತ್ತೆ ಅಪ್ಪಳಿಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಅರಬ್ಬಿ ಸಮುದ್ರದ ನೈಋತ್ಯ ಭಾಗದಲ್ಲಿ ಹಾಗೂ ಗುಜರಾತ್ ಕರಾವಳಿ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ಅ. 1ರಂದು ಶಾಹೀನ್ ಚಂಡಮಾರುತ ಅಬ್ಬರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮಂಕಿ, ಕೊಲ್ಲೂರು, ಅಂಕೋಲಾ, ಕ್ಯಾಸಲ್ ರಾಕ್, ತುಮ್ರಿ, ಕೊಟ್ಟಿಗೆಹಾರ, ಸಿದ್ದಾಪುರ, ಭಟ್ಕಳ, ಕುಂದಾಪುರ, ಹೊನ್ನಾವರ, ಜಗಲ್‌ಪೇಟೆ, ಶಿರಾಲಿ, ಕೋಟ, ಜಾನ್ಮನೆ, ಕಾರ್ಕಳ, ಕೋಣಂದೂರು ಅಗ್ರಹಾರ, ಆಳಂದ, ಕಮ್ಮರಡಿ, ಮಂಗಳೂರು, ಶಿರಾ, ಬ್ರಹ್ಮಾವರ, ಬನವಾಸಿ, ಕಿರವತ್ತಿ, ಮುಂಡಗೋಡು, ಮುಲ್ಕಿ, ಹಳಿಯಾಳ, ಉಡುಪಿ, ಗೋಕರ್ಣ, ಸಂಕೇಶ್ವರ, ತಾಳಗುಪ್ಪ, ತ್ಯಾಗರ್ತಿ, ಕೂಡ್ಲಿಗಿ, ರಾಯಲ್‌ಪಾಡುವಿನಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಅಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್‌ಎಎಲ್‌ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಹೆಚ್ಚು ಮಳೆ

ಎಲ್ಲೆಲ್ಲಿ ಹೆಚ್ಚು ಮಳೆ

ಅಕ್ಟೋಬರ್ 2 ರಿಂದ 4ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಹಾಸನ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 ಕರ್ನಾಟಕದ ಹವಾಮಾನ ಹೇಗಿರಲಿದೆ?

ಕರ್ನಾಟಕದ ಹವಾಮಾನ ಹೇಗಿರಲಿದೆ?

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+