ತೌಕ್ತೆ ದುರ್ಬಲ: ಮೇ 23ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ
ಬೆಂಗಳೂರು, ಮೇ 19: ರಾಜ್ಯದಲ್ಲಿ ಮೇ 23ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಇನ್ನು ಉತ್ತರ ಒಳನಾಡಿನ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರದಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಭಾಗಮಂಡಲ, ಆಲೂರು, ಕಾರವಾರ, ಸಿದ್ದಾಪುರ, ಪಣಂಬೂರು, ಕದ್ರ, ಕಾರ್ಕಳ, ಬೆಳ್ತಂಗಡಿ, ಮಂಗಳೂರು, ಕೊಟ್ಟಿಗೆಹಾರ, ಕಳಸ, ಹೊಳಲ್ಕೆರೆ, ಮಾದಾಪುರ, ಹಾಸನ, ಶಿವಾನಿ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ ಹೀಗಿದೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಳೆಯಾಗಲಿರುವ ಪ್ರದೇಶಗಳು
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಇನ್ನು ಉತ್ತರ ಒಳನಾಡಿನ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರದಲ್ಲಿ ಮಳೆಯಾಗಲಿದೆ.

ವಿವಿಧ ರಾಜ್ಯಗಳಲ್ಲಿ ಮಳೆ ಸಾಧ್ಯತೆ
ತೌಕ್ತೆ ಚಂಡಮಾರುತ ದುರ್ಬಲಗೊಂಡಿದ್ದು, ರಾಜಸ್ಥಾನದ ದಕ್ಷಿಣ ಹಾಗೂ ಅದಕ್ಕೆ ಹೊಂದಿಕೊಂಡಂತೆ ಗುಜರಾತ್‌ನ ಪ್ರದೇಶಗಳನ್ನು ಕೇಂದ್ರೀಕೃತವಾಗಿರಿಸಿ ಸಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಂಡಮಾರುತ ಪರಿಣಾಮವಾಗಿ ಗುಜರಾತಿನಲ್ಲಿ ಭಾರಿ ಮಳೆಯಾಗಿದೆ, ಉತ್ತರಾಖಂಡ, ಹಿಮಾಚಲಪ್ರದೇಶ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications