ರಾಜ್ಯದ ಉತ್ತರ ಒಳನಾಡಿಗೆ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ
ಬೆಂಗಳೂರು, ಡಿಸೆಂಬರ್ 25:ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಬಿಸಿಲ ಧಗೆಯೂ ಹೆಚ್ಚಾಗುತ್ತಿದ್ದು, ಹೀಗಾಗಿ ಮಳೆಯು ಕೂಡ ಬರುವ ಸಾಧ್ಯತೆ ಇದೆ ಎಂದು ತಿಳಿಸಿದೆ.ಬೀದರ್‌ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನುಳಿದಂತೆ ರಾಜ್ಯಾದ್ಯಂತ ಕಳೆದ ಒಂದು ದಿನದಿಂದ ಚಳಿಯೂ ಕೂಡ ಕಡಿಮೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಹಲವೆಡೆ ಒಣಹವೆ ಇದ್ದರೂ ಕೂಡ ಮಳೆ ಬರುವ ಸಾಧ್ಯತೆ ಕೂಡ ಗಾಢವಾಗಿದೆ.

ಇನ್ನುಳಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಮತರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಲಕ್ಷದ್ವೀಪ, , ಅಂಡಮಾನ್ ನಿಕೋಬಾರ್‌ನಲ್ಲಿ ಮಳೆಯಾಗಲಿದೆ. ಹರ್ಯಾಣ, ಪಂಜಾಬ್, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಶೀತಗಾಳಿ ಮುಂದುವರೆದಿದೆ.












Click it and Unblock the Notifications