ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆ

ಬೆಂಗಳೂರು, ಜೂನ್ 29: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ.

ಯಾದಗಿರಿಯ ಭೀಮರಾಯನಗುಂಡಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಪಣಂಬೂರು, ಉಡುಪಿ, ಕಲಬುರಗಿ, ಕುಂದಾಪುರ, ಗೋಕರ್ಣ, ಮಂಕಿ, ಶಿರಾಲಿ, ಭಟ್ಕಳ, ಮುದ್ದೇಬಿಹಾಳ, ಕೊಟ್ಟಿಗೆಹಾರ, ಕಾರ್ಕಳ, ಸಿದ್ದಾಪುರ, ಧರ್ಮಸ್ಥಳ, ಮಾಣಿ, ಬೀದರ್, ಸೋಮವಾರಪೇಟೆ, ಚಾಮರಾಜನಗರ, ತಿನರಸೀಪುರ, ಭರಮಸಾಗರದಲ್ಲಿ ಮಳೆಯಾಗಿದೆ.

ರಾಜ್ಯದಲ್ಲಿ ಮುಂಗಾರು ಆರ್ಭಟ ಮುಂದುವರಿದಿದ್ದು, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಅತಿ ಹೆಚ್ಚು 323.02 ಮಿಮೀ ಮಳೆ ಸುರಿದಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rainfall Will Occur Over Southern And Northern Parts Of Karnataka

ಬಹುತೇಕ ಜಿಲ್ಲೆಗಳಲ್ಲಿ ಜೂ.29ರಿಂದ 3 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಜು.2ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸಾಮಾನ್ಯದಿಂದ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೊಷಿಸಿದ್ದು, ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಕಲಬುರಗಿ ಜಿಲ್ಲೆಯ ಬಹುತೇಕ ಕಡೆ ಭಾನುವಾರ ನಸುಕಿನ ಜಾವ ಮಳೆ ಭರ್ಜರಿಯಾಗಿ ಸುರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+