ರಾಜ್ಯದಲ್ಲಿ ಜೂನ್ 6ರವರೆಗೂ ಅಧಿಕ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್
ಬೆಂಗಳೂರು, ಜೂನ್ 03: ರಾಜ್ಯದಲ್ಲಿ ಜೂನ್ 6 ರವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಇಂದು ಅಂದರೆ ಜೂನ್ 3ರಂದು ಕೇರಳಕ್ಕೆ ಅಪ್ಪಳಿಸಲಿದ್ದು, ಜೂನ್ 5ಕ್ಕೆ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಇಂದಿನಿಂದ ಜೂನ್ 6ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ.

ಯೆಲ್ಲೋ ಅಲರ್ಟ್ ಘೋಷಣೆ
ಜೂನ್ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರಿನಲ್ಲಿ ಮಳೆಯಾಗಲಿದೆ.

ಎಲ್ಲೆಲ್ಲಿ ಹೆಚ್ಚು ಮಳೆ
ನೈರುತ್ಯ ಮುಂಗಾರು ಮಾರುತಗಳು ಜೂನ್ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್ 5ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ದೇಶದ ಮಧ್ಯಭಾಗದಲ್ಲಿ ಮಳೆ
ಈ ವರ್ಷ ಉತ್ತರಮತ್ತು ದಕ್ಷಿಣ ಭಾರತದಲ್ಲಿ ನೈಋತ್ಯ ಮುಂಗಾರು ಮಳೆ ವಾಡಿಕೆಯಂತೆ ಬರಲಿದ್ದು, ದೇಶದ ಮಧ್ಯ ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನೈಋತ್ಯ ಮುಂಗಾರು 2021ಕ್ಕೆ ಸಂಬಂಧಿಸಿದಂತೆ ಮುನ್ಸೂಚನೆಯ ಎರಡನೇ ಮಾಹಿತಿಯನ್ನು ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಈ ವರ್ಷ ದೇಶದಲ್ಲಿ ಮುಂಗಾರು ಮಳೆ ವಾಡಿಕೆಯಂತೆ ಸುರಿಯಲಿದೆ ಎಂದಿದ್ದಾರೆ.
Recommended Video

ರಾಜ್ಯಕ್ಕೆ ಮುಂಗಾರು ಪ್ರವೇಶ
ಕರ್ನಾಟಕದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications