ಏಪ್ರಿಲ್ 11ರಿಂದ ರಾಜ್ಯದಲ್ಲಿ ಜೋರು ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಏಪ್ರಿಲ್ 10: ರಾಜ್ಯದಲ್ಲಿ ಏಪ್ರಿಲ್ 11ರ ಬಳಿಕ ಭಾರಿ ಮಳೆಯಾಗಲಿದ್ದು, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಏಪ್ರಿಲ್ 13 ಹಾಗೂ 14 ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್,ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಏಪ್ರಿಲ್ 13 ಹಾಗೂ 14 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನ ಹೇಗಿದೆ?
ಮುಂದಿನ 24ಗಂಟೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13 ಹಾಗೂ 14 ರಂದು ಎರಡು ದಿನ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಏಪ್ರಿಲ್ 9ರಂದು ಮಳೆಯಾದ ಪ್ರದೇಶಗಳು
ಏಪ್ರಿಲ್ 9 ರಂದು ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿಯ ಕೆಲವು ಭಾಗ, ಭದ್ರಾವತಿ, ಬಾಳೆ ಹೊನ್ನೂರಿನಲ್ಲಿ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಮಳೆ ಚುರುಕಾಗಲಿದೆ.

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು,ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.












Click it and Unblock the Notifications