ಕರ್ನಾಟಕದಲ್ಲಿ ಮತ್ತೆ ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 21 : ಬೆಂಗಳೂರಿನಲ್ಲಿ ಎರಡು ದಿನ ಬ್ರೇಕ್‌ ಕೊಟ್ಟಿದ್ದ ವರುಣ ಇಂದಿನಿಂದ ಮತ್ತೆ ನಾಲ್ಕು ದಿನಗಳ ಕಾಲ ಅಬ್ಬರಿಸಲಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಕೇವಲ ಬೆಂಗಳೂರು ಮಾತ್ರವಲ್ಲದೆ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಇನ್ನು ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದೆ ಅಂತ ಮುನ್ಸೂಚನೆ ನೀಡಿದೆ.

ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಕಾರಣ ಇಂದಿನಿಂದ 4 ದಿನಗಳ ಕಾಲ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬೇರೆ ರಾಜ್ಯಗಳಲ್ಲೂ ಸಹ ವರುಣ ಅಬ್ಬರಿಸುತ್ತಿದ್ದು, ಇಂದು ಆಲಿಕಲ್ಲು ಸಮೇತ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇನ್ನು ನಾಲ್ಕು ದಿನಗಳು ಮೋಡ ಮುಸುಕಿದ ವಾತವರಣವಿರಲಿದ್ದು, ಸಂಜೆ ವೇಳೆಗೆ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಸದ್ಯ ಇನ್ನು ಒಂದು ವಾರಗಳ ಕಾಲ ಕರ್ನಾಟಕದಲ್ಲಿ ವಾತಾವರಣ ಇದೇ ರೀತಿ ಮುಂದುವರೆಯಲಿದ್ದು, ಮಳೆ ನಿಲ್ಲುವ ಯಾವುದೇ ಲಕ್ಷಣಗಳಿಲ್ಲ ಅಂತ ಹವಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್‌, ಪಂಜಾಬ್, ಹರಿಯಾಣ, ದೆಹಲಿ, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅಸ್ಸಾಂ ,ಮೇಘಾಲಯ ಮಣಿಪುರ-ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಬಿರುಗಾಳಿ ಸಮೇತ ಮಳೆಯಾಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಈಶಾನ್ಯ ರಾಜ್ಯಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ.

Karnataka Rains: Heavy Rains to Continue in Karnataka for 4 Days

ಸದ್ಯ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿರುವುದರಿಂದ ಜನರು ಸಹ ಹೈರಾಣಾಗಿ ಹೋಗಿದ್ದಾರೆ. ಇದಲ್ಲದೆ ಸಂಜೆ ಸಮಯದಲ್ಲಿ ಜಿಟಿಜಿಟಿ ಮಳೆಯಾಗುವುದರಿಂದ ಜನರು ಶೀತ, ಕೆಮ್ಮು ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲದೆ ಬೇರೆ ಜಿಲ್ಲೆಗಳಲ್ಲೂ ಕಳೆದ ಒಂದು ತಿಂಗಳಿನಿಂದ ಮಳೆಯಾಗುತ್ತಿರುವುದರಿಂದ ರೈತರು ಸಹ ಬೆಳೆದ ಬೆಳೆ ಸಿಗದೇ ಕಂಗಾಲಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+