2 ಕೋಟಿ ರೂ. ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ: ಮಹತ್ವದ ಮಾಹಿತಿ ಇಲ್ಲಿದೆ

ಬೆಂಗಳೂರು, ಡಿಸೆಂಬರ್‌ 24: ಯಲಹಂಕ ವಲಯದ ಟಾಟಾ ನಗರದಲ್ಲಿ ಕಳೆದ ಬಾರಿ ಮಳೆಯಿಂದಾದ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಹಂಕ ವಲಯ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರ ನಡೆ ವಲಯದ ಕಡೆ ಕಾರ್ಯಕ್ರಮದಲ್ಲಿ ನಡೆದ ಸಭೆಯಲ್ಲಿ, ಟಾಟಾ ನಗರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡು ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಸಾರ್ವಜನಿಕರೊಬ್ಬರು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕೂಡಲೆ ಪ್ರಸ್ತಾವನೆ ಸಿದ್ದಪಡಿಸಿ, ಟೆಂಡರ್ ಕರೆದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Rajakaluve development work at a cost of Rs 2 crore in Yelahanka zone Tatanagar

ಅವೈಜ್ಞಾನಿಕ ರಸ್ತೆ ಉಬ್ಬುಗಳಿದ್ದರೆ ತೆರವುಗೊಳಿಸಿ

ಕೆನರಾ ಬ್ಯಾಂಕ್ ಕಾಲೋನಿಯ ರಾಜಾರಾಂ ಮೋಹನ ರಾಯ್ ರಸ್ತೆಯಲ್ಲಿ ಅನಧಿಕೃತವಾಗಿ ರಸ್ತೆ ಉಬ್ಬು(ಹಂಪ್)ಗಳನ್ನು ನಿರ್ಮಿಸಿದ್ದು, ಅದನ್ನು ತೆರವುಗೊಳಿಸಲು ಕೋರಿದ್ದರ ಬಗ್ಗೆ ಪ್ರತಿಕ್ರಿಯಿಸಿ, ರಸ್ತೆ ಉಬ್ಬು ಮಾಡುವಾಗ ಪೊಲೀಸ್ ಅನುಮತಿ ಪಡೆಯಲಾಗಿರುತ್ತದೆ. ಈ ಪೈಕಿ ಸಂಬಂಧಪಟ್ಟ ಅಧಿಕಾರಿ ಕೂಡಲೆ ಸ್ಥಳ ಪರಿಶೀಲಿಸಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದಲ್ಲಿ, ಅದನ್ನು ತೆರವುಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಫರ್ ಜೋನ್ ನಲ್ಲಿ ಕಟ್ಟಡಗಳ ನಿರ್ಮಿಸಿರುವವರ ಮೇಲೆ ಕ್ರಮ

ನರಸೀಪುರ ಕೆರೆಯ ಬಫರ್ ಜೋನ್ ನಲ್ಲಿ ಅನಧಿಕೃತವಾಗಿ 4 ಅಂತಸ್ತಿನ ಕಟ್ಟಡವನ್ನು ನಿರ್ಮಾಣ ಮಾಡುತ್ತಿದ್ದು, ಅದನ್ನು ತೆರವುಗೊಳಿಸಲು ಕೋರಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಬೆಸ್ಕಾಂಗೆ ನೋಟೀಸ್ ನೀಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿಬೇಕು. ಅನಂತರ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಕನ್ನಡ ನಾಮಫಲಕ ಅಳವಡಿಸಿರುವ ವರದಿ ನೀಡಲು ಸೂಚನೆ

ಜಕ್ಕೂರು ಹಾಗೂ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಬರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಅಳವಡಿಸಿರುವುದಿಲ್ಲ. ಅದನ್ನು ಸರಿಪಡಿಸಲು ಕೋರಿದ್ದರ ಕುರಿತು ಪ್ರತಿಕ್ರಿಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಸೂಚನೆ ನೀಡಿದರು.

ಬಹುತೇಕ ಸಮಸ್ಯೆಗಳ ಇತ್ಯರ್ಥ

ಕಳೆದ ಬಾರಿ ನಾಗರೀಕರಿಂದ ಬಂದಂತಹ ಬಹುತೇಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದು ನಡೆದ ಕಾರ್ಯಕ್ರಮದಲ್ಲಿ ನಾಗರೀಕರಿಂದ 35 ದೂರುಗಳು ಬಂದಿದ್ದು, ಅವುಗಳನ್ನು ಕೂಡಾ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ನಾಗರೀಕರಿಂದ ಬಂದಂತಹ ಪ್ರಮುಖ ಅಹವಾಲುಗಳು

1. ಶಿವನಹಳ್ಳಿ ಕೆರೆ ಬಳಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಮನವಿ.

2. ರಾಮಚಂದ್ರಪುರ ಮುಖ್ಯರಸ್ತೆಯಲ್ಲಿ ರಸ್ತೆ ಅಗಲೀಕರಣ ಪೂರ್ಣಮಾಡಿಕೊಡಲು ಮನವಿ.

3. ನರಸೀಪುರ ಬಡಾವಣೆಯಲ್ಲಿ ಡ್ರೈನ್ ಬ್ಲಾಕ್ ಆಗಿದ್ದು, ಅದನ್ನು ತೆರವು ಮಾಡಲು ಮನವಿ.

4. ಭುವನೇಶ್ವರಿ ನಗರದಲ್ಲಿ ಮನೆ-ಮನೆ ಕಸ ಸಂಗ್ರಹಿಸುವುದನ್ನು ಸಮರ್ಪಕವಾಗಿ ನಿರ್ವಹಿಸಲು ಮನವಿ.

5. ಟಾಟಾ ನಗರ ವ್ಯಾಪ್ತಿಯಲ್ಲಿ ರಾಜಕಾಲುವೆ ಮೇಲೆ ಅಳವಡಿಸಿರುವ ಸ್ಲ್ಯಾಬ್ ಗಳನ್ನು ತೆರವುಗೊಳಿಸಿ ಹೂಳೆತ್ತಲು ಮನವಿ.

6. ದೊಡ್ಡಬೆಟ್ಟಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಅದನ್ನು ಬಗೆಹರಿಸಲು ಮನವಿ.

7. ಪ್ಲಾಸ್ಟಿಕ್ ಬ್ಯಾನ್ ಇದ್ದು, ಅದನ್ನು ಸಂಪೂರ್ಣ ನಿಯಂತ್ರಿಸಲು ಮನವಿ.

8. ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಸೇವಿಸುವುದನ್ನು ತಡೆಯಲು ಮನವಿ.

9. ತಿಂಡ್ಲು ಬಳಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಅದನ್ನು ನಿಯಂತ್ರಿಸಲು ಮನವಿ.

10. ಜಿಕೆವಿಕೆ ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಶೆಡ್ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ.

11. ನರಸೀಪುರ 5ನೇ ಕ್ರಾಸ್ ನಲ್ಲಿ ಚರಂಡಿ ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದು, ಅದನ್ನು ತೆರವುಗೊಳಿಸಲು ಮನವಿ.

12. ಒಳಚರಂಡಿಗಳಲ್ಲಿ ಸ್ವಚ್ಚತೆ ಮಾಡಿ, ಕೊಳಚೆ ನೀರು ಹೋರಬರದಂತೆ ಕ್ರಮವಹಿಸಲು ಮನವಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+