ರಾಜಸ್ಥಾನದ ಕಾಂಗ್ರೆಸ್ ಸರಕಾರ ವಜಾಗೊಳಿಸುವಂತೆ ನಳಿನ್ ಕುಮಾರ್ ಕಟೀಲ್ ಆಗ್ರಹ

ಬೆಂಗಳೂರು, ಜೂ.29: ''ರಾಜಸ್ಥಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಅಲ್ಲದೆ, ಎಲ್ಲ ರಂಗಗಳಲ್ಲಿ ವಿಫಲವಾಗಿರುವ ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಬೇಕು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ.

''ರಾಜಸ್ಥಾನದಲ್ಲಿ ಮೂಲಭೂತವಾದಿ ಜಿಹಾದಿ ಮಾನಸಿಕತೆಯ ವ್ಯಕ್ತಿಗಳಿಂದ ಕನ್ಹಯ್ಯಲಾಲ್ ಅವರ ಹತ್ಯೆ ನಡೆದಿದೆ. ಇದನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ತಮಗೆ ಜೀವ ಬೆದರಿಕೆ ಇರುವ ಕುರಿತು ಕನ್ಹಯ್ಯಲಾಲ್ ಅವರು ಪೊಲೀಸರಿಗೆ ತಿಳಿಸಿದ್ದರು. ಆದರೂ ಅವರಿಗೆ ಪೊಲೀಸರು ರಕ್ಷಣೆ ನೀಡಿಲ್ಲ. ಈ ಹತ್ಯೆಗೆ ಪೊಲೀಸ್ ವೈಫಲ್ಯ ಮತ್ತು ಅಲ್ಲಿನ ರಾಜ್ಯದ ಕಾಂಗ್ರೆಸ್ ಸರಕಾರದ ವಿಫಲತೆಯೇ ಕಾರಣವಾಗಿದೆ'' ಎಂದು ನಳಿನ್ ತಿಳಿಸಿದ್ದಾರೆ.

ಕಾಂಗ್ರೆಸ್ ಸರಕಾರವು ಕರ್ನಾಟಕದಲ್ಲೂ ಹಿಂದೆ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನೇ ತನ್ನದಾಗಿಸಿಕೊಂಡಿತ್ತು. 24ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರ ಕೊಲೆಗೆ ಪರೋಕ್ಷವಾಗಿ ಕಾಂಗ್ರೆಸ್ ಕಾರಣವಾಗಿತ್ತು. ಮತಬ್ಯಾಂಕ್ ರಾಜಕೀಯವನ್ನೇ ಬೆಂಬಲಿಸುವ ಸಿದ್ದರಾಮಯ್ಯನವರು ಈ ಕೊಲೆಗಳಿಗೆ ಬೆಂಬಲವಾಗಿ ನಿಂತು ದೇಶ ವಿರೋಧಿ ಸಂಘಟನೆಗಳ ಮುಖಂಡರ ಮೇಲಿನ ಪ್ರಕರಣಗಳನ್ನು ರದ್ದುಪಡಿಸಿದ್ದರು ಎಂದು ಅವರು ವಿವರಿಸಿದರು.

Rajasthan Congress Government Should Be Dismissed: Nalin Kumar Kateel

ರಾಜಸ್ಥಾನದ ಕಾಂಗ್ರೆಸ್ ಸರಕಾರವು ತುಷ್ಟೀಕರಣ ನೀತಿಯನ್ನು ಬೆಂಬಲಿಸುವ ಕಾಂಗ್ರೆಸ್ಸಿಗರ ಡಿಎನ್‍ಎಯನ್ನು ತನ್ನದಾಗಿಸಿಕೊಂಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮಾನಸಿಕತೆಯೇ ಇಂಥ ಘಟನೆಗಳಿಗೆ ಕಾರಣ. ಇದನ್ನು ಕೂಡಲೇ ನಿಯಂತ್ರಣಕ್ಕೆ ತರುವಂತೆ ಅವರು ಆಗ್ರಹಿಸಿದ್ದಾರೆ.

Rajasthan Congress Government Should Be Dismissed: Nalin Kumar Kateel

ಹತ್ಯೆ ಖಂಡನೀಯ: ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಲಾಲ್ ಹತ್ಯೆ ಖಂಡನೀಯ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ.

ಜಾತ್ಯತೀತ ಪಕ್ಷಗಳು ಎಂದು ಹೇಳಿಕೊಳ್ಳುತ್ತಿರುವ ಕುಮ್ಮಕ್ಕಿನಿಂದ ದೇಶದಲ್ಲಿ ಇಂತಹ ಹತ್ಯೆಗಳು ನಡೆಯುತ್ತಿವೆ. ಮತ್ತೊಬ್ಬರನ್ನು ಕೊಲ್ಲುವುಂತಹ ಅನಾಗರಿಕ ಮನಸ್ಥಿತಿ ಇರುವವರನ್ನು ಈ ಭೂಮಿಯಿಂದಲೇ ತೊಲಗಿಸಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+