ಚನ್ನಪಟ್ಟಣ ಮೇಲೆ ಡಿಕೆಶಿ ಕಣ್ಣು ; ರಾಜೀವ್ ಗಾಂಧಿ ವಿವಿ ರಾಮನಗರಕ್ಕೆ ಸ್ಥಳಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆಪ್ಟೆಂಬರ್‌ 25: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಡಿ ಕೆ ಬ್ರದರ್ಸ್‌ ಗೆ ಪ್ರತಿಷ್ಠೆಯಾಗಿದೆ. ಈ ನಿಟ್ಟಿನಲ್ಲಿ ರಾಮನಗರ ಜನತೆಯ ಮನ ಗೆಲ್ಲಲು ಹಲವು ಅಭಿವೃದ್ದಿ ಕಾರ್ಯಕ್ರಮಗಳನ್ನ ಡಿ ಕೆ ಶಿವಕುಮಾರ್‌ ನಡೆಸುತ್ತಿದ್ದು, ಇದೀಗ ರಾಜೀವ್‌ ಗಾಂಧಿ ವಿವಿ ರಾಮನಗರಕ್ಕೆ ಸ್ಥಳಾಂತರಿಸಲು ಮುಂದಾಗಿದ್ದಾರೆ.

ರಾಜೀವ್ ಗಾಂಧಿ ವೈದ್ಯಕೀಯ ವಿವಿಯನ್ನು ಹಂತ ಹಂತವಾಗಿ ರಾಮನಗರಕ್ಕೆ ಸ್ಥಳಾಂತರ ಹಾಗೂ ಕನಕಪುರ ಮೆಡಿಕಲ್ ಕಾಲೇಜಿಗೆ ಮೂಲಸೌಕರ್ಯ ಹೆಚ್ಚಿಸಿ ಎನ್ ಎಂ ಸಿ (ನ್ಯಾಷನಲ್ ಮೆಡಿಕಲ್ ಕಮಿಷನ್)ಗೆ ಮರು ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Rajiv Gandhi University of Health Sciences to be shifted to Ramanagara in phases DCM DK Shivakumar

ರಾಮನಗರ ಹಾಗೂ ಕನಕಪುರ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಹಾಗೂ ಕಾರ್ಯಾರಂಭ ಸಂಬಂಧ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್, ಉಪಕುಲಪತಿ ಹಾಗೂ ಶಾಸಕ ಶಿವಲಿಂಗೇಗೌಡ ಅವರು ಬುಧವಾರ ಸಭೆ ನಡೆಸಿದರು.

ಸಭೆ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್ ಅವರು, ರಾಮನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಇರುವ ಭೂ ಸ್ವಾಧೀನ ಸಮಸ್ಯೆಗೆ ಪರಿಹಾರ ನೀಡಿ ಕಾಮಗಾರಿ ನಡೆಸಲಾಗುತ್ತಿದೆ. ರಾಮನಗರದಲ್ಲಿ ಮೆಡಿಕಲ್ ಕಾಲೇಜು ಪ್ರಾರಂಭ ಮಾಡಲು ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗುತ್ತಿದೆ. ವೈದ್ಯಕೀಯ ವಿವಿ ಕೇಂದ್ರ ಕಚೇರಿಯನ್ನು ರಾಮನಗರಕ್ಕೆ ಸ್ಥಳಾಂತರಗೊಳಿಸಲು ಸೂಚಿಸಿದ್ದೇನೆ. ಈ ವಿಚಾರವಾಗಿ ಈ ಹಿಂದೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಗೃಹ ಮಂಡಳಿಯಿಂದ ಜಮೀನು ಪಡೆದು ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಗುವುದು. ಕನಕಪುರದಲ್ಲಿ ಮೂಲಸೌಕರ್ಯ ಇಲ್ಲ ಎಂದು ಎನ್ಎಂಸಿಯಿಂದ ಅರ್ಜಿ ತಿರಸ್ಕರಿಸಲಾಗಿತ್ತು. ಹೀಗಾಗಿ ಮೂಲಸೌಕರ್ಯ ಹೆಚ್ಚಿಸಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಹಿಂದೆ ಕನಕಪುರದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಟೆಂಡರ್ ಕರೆದು ಭೂಮಿ ಪೂಜೆ ಮಾಡಲಾಗಿತ್ತು. ನಂತರ ಯಡಿಯೂರಪ್ಪನವರ ಸರ್ಕಾರದಲ್ಲಿ ಮಾಜಿ ಸಚಿವ ಸುಧಾಕರ್ ಅವರು ಚಿಕ್ಕಬಳ್ಳಾಪುರಕ್ಕೆ ಆ ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋದರು. ಆಗ ₹450 ಕೋಟಿ ಇದ್ದ ಮೆಡಿಕಲ್ ಕಾಲೇಜು ನಿರ್ಮಾಣ ವೆಚ್ಚ ₹850 ಕೋಟಿಗೆ ಏರಿಕೆಯಾಗಿದೆ.

ಬಿಜೆಪಿ ದ್ವೇಷದ ರಾಜಕಾರಣ ಮಾಡಿದೆ. ನಾವು ಬಜೆಟ್ ನಲ್ಲಿ ಇದನ್ನು ಘೋಷಿಸಿದ್ದು, ಇದನ್ನು ಹಂತ ಹಂತವಾಗಿ ಪೂರ್ಣಗೊಳಿಸುತ್ತೇವೆ. ಕಾಲೇಜು ನಿರ್ಮಾಣಕ್ಕೆ ಅನುಮತಿ ನೀಡುವಂತೆ ಮರು ಅರ್ಜಿ ಹಾಕುತ್ತೇವೆ. ರಾಮನಗರದಲ್ಲಿನ ಕಟ್ಟಡ ಕಾಮಗಾರಿಗೆ ₹600 ಕೋಟಿ ಬಿಡುಗಡೆಯಾಗಿದ್ದು, ಕೆಲಸ ಭರದಿಂದ ಸಾಗುತ್ತಿದೆ. ನಾವು ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ತಿಳಿಸಿದರು.

ವಿವಿಯನ್ನು ಯಾವಾಗ ಸ್ಥಳಾಂತರ ಮಾಡಲಾಗುವುದು ಎಂದು ಕೇಳಿದಾಗ, "ರಾಜೀವ್ ಗಾಂಧಿ ವಿವಿ ಕೇಂದ್ರ ಕಚೇರಿ ರಾಮನಗರದಲ್ಲಿ ನಿರ್ಮಾಣ ಮಾಡಬೇಕು ಎಂದು 2008ರಲ್ಲೇ ಸರ್ಕಾರದ ಆದೇಶ ಹೊರಡಿಸಿ ಬಿಲ್ ಮಂಡಿಸಲಾಗಿದೆ. ಇದನ್ನು ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುವುದು" ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+