ಕರ್ನಾಟಕಕ್ಕೆ ಉದ್ಯಮ ಬಂದ್ರೆ ಯುಪಿ, ಬಿಹಾರಿಗಳಿಗೆ ಉದ್ಯೋಗ: ರಾಜನಾಥ್ ಸಿಂಗ್ ಹೇಳಿಕೆಗೆ ಕನ್ನಡಿಗರ ವಿರೋಧ
ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ "ಇನ್ವೆಸ್ಟ್ ಕರ್ನಾಟಕ"ವು ಅದ್ಧೂರಿಯಾಗಿ ನಡೆಯುತ್ತಿದೆ. ಈ ಸಮಾವೇಶದಿಂದ ಕನ್ನಡಿಗರ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತೆ ಎಂದು ರಾಜ್ಯದ ಜನ ನಿರೀಕ್ಷೆಯಲ್ಲಿದ್ದಾರೆ. ಆದರೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕನ್ನಡಿಗರ ವಿರೋಧಿಯಾಗಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ. ಸಚಿವರ ಹೇಳಿಕೆಯು ಕನ್ನಡಿಗರ ಬದುಕನ್ನು ಮತ್ತೆ ಬೀದಿಗೆ ತಳ್ಳುವಂತಿದೆ ಎಂದು ದೂರುತ್ತಿದ್ದಾರೆ.
ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಕೂಡ ಖಂಡಿಸಿ ಪೋಸ್ಟ್ ಮಾಡಿದ್ದಾರೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಉತ್ತರ ಪ್ರದೇಶ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಹೇಳಿದ್ದಾರೆ. ಇದು ಅತ್ಯಂತ ದುರಹಂಕಾರದ, ಅತಾರ್ಕಿಕ, ಅಧರ್ಮದ, ಅನ್ಯಾಯದ, ಅನೈತಿಕ ಹೇಳಿಕೆ ಎಂದು ಖಂಡಿಸಿದ್ದಾರೆ.

ರಾಜನಾಥ್ ಸಿಂಗ್ ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. ಬಿಜೆಪಿ ನೇತೃತ್ವದ ಸರ್ಕಾರಗಳು ಬಂದಾಗೆಲ್ಲ ಅವರು ಕೇಂದ್ರ ಮಂತ್ರಿಯಾಗಿದ್ದಾರೆ. ಕಳೆದ ಅವಧಿಯಲ್ಲಿ ಅವರು ಕೇಂದ್ರ ಗೃಹ ಸಚಿವರಾಗಿದ್ದವರು. ಈ ಹಿಂದೆ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಇಷ್ಟಾಗಿಯೂ ಅವರಿಗೆ ಭಾರತ ಒಕ್ಕೂಟ ವ್ಯವಸ್ಥೆ ಅರ್ಥವಾಗದೇ ಇರುವುದು, ಒಕ್ಕೂಟ ಧರ್ಮದ ಪರಿಜ್ಞಾನವೇ ಇಲ್ಲದಿರುವುದು ದುರಂತ ಎಂದಿದ್ದಾರೆ.
ರಾಜನಾಥ ಸಿಂಗ್ ಅವರಿಗೆ ಒಕ್ಕೂಟ ವ್ಯವಸ್ಥೆ ಹೇಗೆ ನಡೆಯಬೇಕೆಂಬ ಕನಿಷ್ಟ ಪರಿಜ್ಞಾನವಿದ್ದಿದ್ದರೆ, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಯಾಗುವುದರಿಂದ ಸ್ಥಳೀಯ ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ಹೇಳಿರುತ್ತಿದ್ದರು. ಯಾವುದೇ ರಾಜ್ಯದಲ್ಲಿ ಉದ್ಯಮ ಆರಂಭವಾದರೂ ಅಲ್ಲಿನ ಜನರಿಗೆ ಉದ್ಯೋಗ ದೊರೆಯಬೇಕೆಂಬುದು ಸಹಜ ನ್ಯಾಯ ಅನ್ನುವುದು ರಾಜಕಾರಣಿಗಳಿಗೆ ಇರಬೇಕಾದ ಸಾಮಾನ್ಯ ಜ್ಞಾನ. ಕರ್ನಾಟಕದಲ್ಲಿ ಲಕ್ಷಾಂತರ ಯುವಕ-ಯುವತಿಯರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವಾಗ ರಾಜನಾಥ ಸಿಂಗ್ ಯುಪಿ, ಬಿಹಾರದ ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಯಾಕೆ ಹೇಳಿದರು? ಎಂದು ಪ್ರಶ್ನಿಸಿದ್ದಾರೆ.

ವಾಸ್ತವವೆಂದರೆ ರಾಜನಾಥ್ ಸಿಂಗ್ ಬುಟ್ಟಿಯಲ್ಲಿದ್ದ ಹಾವನ್ನು ಹೊರಗೆ ಬಿಟ್ಟಿದ್ದಾರೆ. ದೇಶದ ಅಭಿವೃದ್ಧಿ ಎಂದರೆ ಉತ್ತರ ಭಾರತೀಯರ ಅಭಿವೃದ್ಧಿ ಎಂಬುದು ಅವರ ಒಳಗಿನ ಅಜೆಂಡಾ. ಜನಸಂಖ್ಯೆ ನಿಯಂತ್ರಣ ಮಾಡಿಕೊಳ್ಳದೇ ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಯುಪಿ, ಬಿಹಾರಗಳ ಜನರನ್ನು "ಸುರಕ್ಷಿತ ಸ್ವರ್ಗ"ದಂತಿರುವ ಕರ್ನಾಟಕಕ್ಕೆ ತುಂಬಿಸುವುದು ಅವರ ಗುರಿ. ಹಿಂದೆ ಇದೆಲ್ಲ ಮುಗುಮ್ಮಾಗಿ ನಡೆಯುತ್ತಿತ್ತು. ಈಗ ಅದು ಬಹಿರಂಗವಾಗಿಯೇ ಅವರ ಬಾಯಿಂದ ಹೊರಬಿದ್ದಿದೆ ಎಂದು ಟೀಕಿಸಿದ್ದಾರೆ.
ಹೂಡಿಕೆದಾರರಿಗೆ ಬೇಕಾಗುವ ಜಮೀನನ್ನು ನಮ್ಮ ರಾಜ್ಯ ಸರ್ಕಾರವೇ ರೈತರಿಂದ ಸ್ವಾಧೀನಪಡಿಸಿಕೊಂಡು ಕೊಡುತ್ತೆ. ಈ ಉದ್ಯಮಗಳಿಗೆ ನಮ್ಮ ರೈತರು ಸರ್ಕಾರ ಕೊಡುವ ಅಲ್ಪ ಪರಿಹಾರಕ್ಕೆ ಜಮೀನು ಕೊಟ್ಟು ದೇಶದ ಅಭಿವೃದ್ಧಿಗೆ "ತ್ಯಾಗ" ಮಾಡಬೇಕು. ಅವರ ಮಕ್ಕಳು ನಿರುದ್ಯೋಗಿಗಳಾಗಿ ಬೀದಿಬೀದಿ ಅಲೆಯಬೇಕು. ಅಲ್ಲಿ ಏಳುವ ಉದ್ಯಮಗಳಲ್ಲಿ ರೋಗಿಷ್ಠ ರಾಜ್ಯಗಳ ನಿರುದ್ಯೋಗಿಗಳಿಗೆ ಕೆಲಸ ನೀಡಬೇಕು. ಇದ್ಯಾವ ನ್ಯಾಯ? ಕರ್ನಾಟಕ, ಕನ್ನಡಿಗರು ಇವರಿಗೆ ಕಾಲಕಸವಾಗಿ ಹೋದರೆ? ಎಂದು ಹರಿಹಾಯ್ದಿದ್ದಾರೆ.
ರಾಜನಾಥ ಸಿಂಗ್ ಅವರ ಈ ಹೇಳಿಕೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ. ಕರ್ನಾಟಕ ಸರ್ಕಾರವು ರಾಜ್ಯದ ಉದ್ಯಮಗಳಲ್ಲಿ ಕಡ್ಡಾಯವಾಗಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಲುವಾಗಿ ಕಾಯ್ದೆ ರೂಪಿಸಬೇಕು. ರಾಜನಾಥ್ ಸಿಂಗ್ ಹೇಳಿದಂತೆ ಕರ್ನಾಟಕದ ಉದ್ಯಮಗಳಲ್ಲಿ ಯುಪಿ, ಬಿಹಾರಿಗಳು ತುಂಬಿಕೊಂಡರೆ ಕನ್ನಡ ಜನರ ಆಕ್ರೋಶ ಭುಗಿಲೇಳುತ್ತೆ. ದಂಗೆಯಂಥ ಸನ್ನಿವೇಶ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಇದಕ್ಕೆ ಎಲ್ಲರೂ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications