ಫೆ.26ರಂದು ಕರ್ನಾಟಕದಲ್ಲಿ ರಾಜನಾಥ್ ಮತಬೇಟೆ
ಬೆಂಗಳೂರು, ಫೆ.25 : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಚುನಾವಣಾ ಪ್ರಚಾರ ರಂಗು ಪಡೆದುಕೊಳ್ಳುತ್ತಿದೆ. ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಬುಧವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಕರ್ನಾಟಕದಲ್ಲಿ ಎರಡು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಒಂದು ಸುತ್ತಿನ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಸದ್ಯ ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮಂಗಳೂರು ಮತ್ತು ದಾವಣಗೆರೆಯಲ್ಲಿ 2 ಸಮಾವೇಶ ಉದ್ದೇಶಿಸಿ ಮಾತನಾಡಿದ್ದಾರೆ. [ಕರ್ನಾಟಕದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು]

ಫೆ.28ರಂದು ಗುಲ್ಬರ್ಗ ಮತ್ತು ಹುಬ್ಬಳ್ಳಿಯಲ್ಲಿ ಎರಡು ಸಮಾವೇಶ ಉದ್ದೇಶಿಸಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಫೆ.26ರ ಬುಧವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಶಿವಮೊಗ್ಗ ಮತ್ತು ದೊಡ್ಡಬಳ್ಳಾಪುರದಲ್ಲಿ ಎರಡು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. [ಬಿಜೆಪಿ ಕಾರ್ಯಕರ್ತರಿಂದ ನಮೋ ಜಪ]
ಮೊದಲ ಸಮಾವೇಶ : ಫೆ.26ರ ಬೆಳಗ್ಗೆ 10 ಗಂಟೆಗೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಮೈದಾನದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ್ ಮುಂತಾದವರು ಭಾಗವಹಿಸಲಿದ್ದಾರೆ.
ಎರಡನೇ ಸಮಾವೇಶ : ಫೆ.26ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಭಾರತ ಗೆಲ್ಲಿಸಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶ ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಲಿದ್ದಾರೆ. ನಗರದ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಮೈದಾನದಲ್ಲಿ ಸಮಾವೇಶ ನಡೆಯಲಿದೆ.












Click it and Unblock the Notifications