ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ ಕಾರ್ಯದರ್ಶಿ ಆದೇಶ ನೀಡಿದ್ದಾರೆ.

1986 ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಗೋಯಲ್ ಸದ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

Rajneesh Goel Appointed as Chief Secretary of Karnataka

ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವಂದಿತಾ ಶರ್ಮಾ ನವೆಂಬರ್ 30ರಂದು ನಿವೃತ್ತಿಯಾಗಲಿದ್ದು ಅವರ ಸ್ಥಾನಕ್ಕೆ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ಗೋಯೆಲ್ ಅವರು ಜುಲೈ 2024 ರಲ್ಲಿ ಅವರ ನಿವೃತ್ತಿಯಾಗುವವರೆಗೆ ಮುಖ್ಯ ಕಾರ್ಯದರ್ಶಿಯಾಗಿರುತ್ತಾರೆ.

ಮುಂದಿನ ಮುಖ್ಯ ಕಾರ್ಯದರ್ಶಿಯನ್ನು ಆಯ್ಕೆ ಮಾಡಲು ರಾಜ್ಯ ಸಚಿವ ಸಂಪುಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಿತ್ತು.

ಗೋಯೆಲ್ ಅವರು ಕರ್ನಾಟಕದ 40ನೇ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಗೋಯೆಲ್ ಅವರ ಪತ್ನಿ ಶಾಲಿನಿ ರಜನೀಶ್ ಕೂಡ ಐಎಎಸ್ ಅಧಿಕಾರಿಯಾಗಿದ್ದು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗೋಯೆಲ್ ದಂಪತಿ ಪಂಜಾಬ್ ಮೂಲದವರು.

ಹಲವು ಅರ್ಹ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಆಕಾಂಕ್ಷಿಗಳಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋಯೆಲ್ ಅವರನ್ನು ಉನ್ನತ ಹುದ್ದೆಗೆ ಆಯ್ಕೆ ಮಾಡಿದ್ದಾರೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನಗರಾಭಿವೃದ್ಧಿ) ರಾಕೇಶ್ ಸಿಂಗ್ ಸ್ಥಾನಕ್ಕಾಗಿ ಪ್ರಯತ್ನಿಸುತ್ತಿದ್ದರು ಎಂದು ವರದಿಯಾಗಿದೆ.

ತಮ್ಮ 37 ವರ್ಷಗಳ ವೃತ್ತಿ ಜೀವನದಲ್ಲಿ ರಜನೀಶ್ ಗೋಯಲ್, ಬಿಬಿಎಂಪಿ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಉನ್ನತ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಕ್ರೀಡಾ ಇಲಾಖೆಗಳಲ್ಲಿ ಕೆಲಸ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+