ರಾಜ್ಯಸಭೆ ಚುನಾವಣೆ 2016 : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

Posted By:
Subscribe to Oneindia Kannada

ಬೆಂಗಳೂರು, ಮೇ 28 : ಕರ್ನಾಟಕ ಕಾಂಗ್ರೆಸ್ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡೀಸ್ ಮತ್ತು ಜೈರಾಮ್ ರಮೇಶ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಟ್ಟಿಯನ್ನು ನೀಡಿದ್ದರು. ಪಟ್ಟಿಗೆ ವರಿಷ್ಠರು ಒಪ್ಪಿಗೆ ಕೊಟ್ಟಿದ್ದು ಶನಿವಾರ ಬಿಡುಗಡೆಯಾಗಿದೆ. [ರಾಜ್ಯಸಭೆ ಚುನಾವಣಾ ವೇಳಾಪಟ್ಟಿ 2016]

congress

ರಾಜ್ಯಸಭೆ ಅಭ್ಯರ್ಥಿಗಳು : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರ ಆಯ್ಕೆಗೆ ಜೂನ್ 11ರಂದು ಚುನಾವಣೆ ನಡೆಯಲಿದೆ. ಮಾಜಿ ಕೇಂದ್ರ ಸಚಿವರಾದ ಆಸ್ಕರ್ ಫರ್ನಾಂಡೀಸ್ ಮತ್ತು ಜೈರಾಮ್ ರಮೇಶ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಮೂರನೇ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಅವರು ಕಣಕ್ಕಿಳಿಯಲಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ 123 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸಬಹುದಾಗಿದೆ. ಇಬ್ಬರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಈಗಾಗಲೇ ಪ್ರಕಟಿಸಿದೆ. ಜೆಡಿಎಸ್ ಬೆಂಬಲ ಪಡೆದರೆ ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸಬಹುದಾಗಿದೆ. ಜೆಡಿಎಸ್ ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆಯೇ? ಕಾದು ನೋಡಬೇಕು. [ಕಾಂಗ್ರೆಸ್ 5 ಜೆಡಿಎಸ್ ಶಾಸಕರ ಬೆಂಬಲ]

ಆಸ್ಕರ್ ಫರ್ನಾಂಡೀಸ್‌ಗೆ ಟಿಕೆಟ್

ಆಸ್ಕರ್ ಫರ್ನಾಂಡೀಸ್‌ಗೆ ಟಿಕೆಟ್

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆಯ ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರಿಗೆ ರಾಜ್ಯಸಭೆ ಚುನಾವಣೆಯ ಟಿಕೆಟ್ ನೀಡಲಾಗಿದೆ.
ಜೈರಾಮ್ ರಮೇಶ್‌ ಅವರಿಗೆ ಟಿಕೆಟ್

ಜೈರಾಮ್ ರಮೇಶ್‌ ಅವರಿಗೆ ಟಿಕೆಟ್

ಕೇಂದ್ರ ಪಂಚಾಯತ್ ರಾಜ್ ಖಾತೆ ಮಾಜಿ ಸಚಿವ ಜೈರಾಮ್ ರಮೇಶ್ ಅವರಿಗೆ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.
ಕೆ.ಸಿ.ರಾಮಮೂರ್ತಿಗೆ ಟಿಕೆಟ್

ಕೆ.ಸಿ.ರಾಮಮೂರ್ತಿಗೆ ಟಿಕೆಟ್

ನಿವೃತ್ತ ಐಪಿಎಸ್ ಅಧಿಕಾರಿ ಕೆ.ಸಿ.ರಾಮಮೂರ್ತಿ ಅವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿದೆ. 3ನೇ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿಯಲಿದ್ದಾರೆ.
ರಿಜ್ವಾನ್ ಅರ್ಷದ್‌ಗೆ ಟಿಕೆಟ್

ರಿಜ್ವಾನ್ ಅರ್ಷದ್‌ಗೆ ಟಿಕೆಟ್

ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರಿಗೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ವಿಧಾನಪರಿಷತ್ ಅಭ್ಯರ್ಥಿಗಳು : ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದ 7 ಸದಸ್ಯರು ನಿವೃತ್ತರಾಗಲಿದ್ದು, ಅವರ ಸ್ಥಾನಗಳನ್ನು ಭರ್ತಿ ಜೂನ್ 10ರಂದು ಮತದಾನ ನಡೆಯಲಿದೆ. ಪರಿಷತ್ ಚುನಾವಣೆಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಅಭ್ಯರ್ಥಿಗಳು
* ರಿಜ್ವಾನ್ ಅರ್ಷದ್
* ಅಲ್ಲಂ ವೀರಭದ್ರಪ್ಪ
* ಆರ್‌.ಬಿ.ತಿಮ್ಮಾಪುರ
* ವೀಣಾ ಅಚ್ಚಯ್ಯ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congress on Saturday released the final list of candidates for the Rajya Sabha election 2016. Oscar Fernandes, Jai Ram Ramesh got ticket for election. Election will be held on June 11, 2016.
Please Wait while comments are loading...