ರಾಜ್ಯಸಭಾ ಚುನಾವಣೆ : ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ
ಬೆಂಗಳೂರು, ಮಾರ್ಚ್ 23: ಕರ್ನಾಟಕದ 4 ಸ್ಥಾನಗಳು ಸೇರಿ ದೇಶದಾದ್ಯಂತ ಖಾಲಿ ಇರುವ 58 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಿ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜನರಿಂದ ನೇರವಾಗಿ ಆಯ್ಕೆಯಾಗಿರುವ ಶಾಸಕರು ಈ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ 5 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ನಿಂದ ಎಲ್. ಹನುಮಂತಯ್ಯ, ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಸ್ಪರ್ಧಿಸುತ್ತಿದ್ದರೆ ಜೆಡಿಎಸ್ ನಿಂದ ಬಿ.ಎಂ. ಫಾರೂಕ್ ಕಣದಲ್ಲಿದ್ದಾರೆ.

ಬಿಜೆಪಿ ಒಂದು ಮತ್ತು ಕಾಂಗ್ರೆಸ್ ಇಬ್ಬರು ಅಭ್ಯರ್ಥಿಗಳನ್ನು ಆರಾಮವಾಗಿ ರಾಜ್ಯಸಭೆಗೆ ಕಳುಹಿಸಬಹುದಾಗಿದ್ದು ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ.
ಬಹುನಿರೀಕ್ಷಿತ ರಾಜ್ಯಸಭೆ ಚುನಾವಣೆಯ ಫಲಿತಾಂಶ ಇಂದು ಸಂಜೆಯೇ ಹೊರಬೀಳಲಿದೆ. ಸಂಜೆ 4 ಗಂಟೆಗೆ ಮತದಾನ ಅಂತ್ಯವಾಗುತ್ತಿದ್ದಂತೆ ಮತ ಎಣಿಕೆ ಆರಂಭವಾಗಲಿದ್ದು, ತಕ್ಷಣವೇ ಫಲಿತಾಂಶ ಹೊರಬೀಳಲಿದೆ.













Click it and Unblock the Notifications