ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆ: ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ!

|
Google Oneindia Kannada News

ಬೆಂಗಳೂರು, ಜೂ. 08: ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ತನ್ನ ಅಚ್ಚರಿಯ ನಿರ್ಧಾರಗಳಿಂದ ಸಂಚಲನ ಮೂಡಿಸಿದೆ. ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬಂತೆ ಪಕ್ಷ ನಿಷ್ಠರಿಗೆ ರಾಜ್ಯಸಭಾ ಟಿಕೆಟ್ ಕೊಡುವ ಮೂಲಕ ಬಿಜೆಪಿಯಲ್ಲಿ ಭಿನ್ನಮತ ಮಾಡುವವರಿಗೆ ಚುರುಕು ಮುಟ್ಟಿಸಿದೆ. ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಐವರ ಹೆಸರುಗಳನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಅಚ್ಚರಿಯ ಹೆಸರುಗಳನ್ನು ಪ್ರಕಟಿಸಿದೆ.

Recommended Video

ಚಿರಂಜೀವಿಯ ಅಂತಮ ದರ್ಶನ ಪಡೆದ ರವಿಚಂದ್ರನ್ ಕುಟುಂಬ | Chiranjeevi Sarja | Ravi chandran | Oneindia Kannada

ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರ ಹೆಸರುಗಳನ್ನು ಪ್ರಕಟ ಮಾಡಿದೆ. ಇದು ರಾಜ್ಯ ಬಿಜೆಪಿ ನಾಯಕರಿಗೂ ಅಚ್ಚರಿಯ ವಿಚಾರ. ಬಿಜೆಪಿ ಅಚ್ಚರಿಯ ಆಯ್ಕೆಯ ಆ ಇಬ್ಬರು ಅಭ್ಯರ್ಥಿಗಳ ಮಾಹಿತಿ ಇಲ್ಲಿದೆ.

ರಾಜ್ಯಸಭಾ ಚುನಾವಣೆ: ದೇವೇಗೌಡರ ಹಾದಿ ಸುಗಮವಾಗಿದ್ದು ಹೀಗೆ!ರಾಜ್ಯಸಭಾ ಚುನಾವಣೆ: ದೇವೇಗೌಡರ ಹಾದಿ ಸುಗಮವಾಗಿದ್ದು ಹೀಗೆ!

ಬಿಜೆಪಿ ಅಭ್ಯರ್ಥಿ ಈರಣ್ಣ ಕಡಾಡಿ: ಆಶ್ಚರ್ಯ ಎಂಬಂತೆ ಘಟಾನುಘಟಿ ನಾಯಕರನ್ನು ಹಿಂದಿಕ್ಕಿ ಬಿಜೆಪಿಯಿಂದ ರಾಜ್ಯಸಭೆಗೆ ಪ್ರವೇಶ ಪಡೆಯುತ್ತಿರುವ ಈರಣ್ಣ ಕಡಾಡಿ ಮೊದಲಿನಿಂದಲೂ ಆರ್‌ಎಸ್‌ಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ ಈರಣ್ಣ ಕಡಾಡಿ ಅವರು 1966ರ ಜೂನ್ 01 ಜನಿಸಿದ್ದಾರೆ. 1989 ರಿಂದಲೂ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅರಭಾಂವಿ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ್ದರು. ಜೊತೆಗೆ ಗೋಕಾಕ್ ತಾಲೂಕು ಬಿಜೆಪಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Heres Look At Ashok Gasti And Eerana Kadadi, Bjps Candidates For Rajya Sabha Election

1994 ರಲ್ಲಿ ಅರಭಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಆಗ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ವಿ.ಎಸ್. ಕೌಜಲಗಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ನಂತರ 2004ರಲ್ಲಿ ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದರು. 2010ರಲ್ಲಿ ಬೆಳಗಾವಿ ಜಿ.ಪಂ.ಅಧ್ಯಕ್ಷರಾಗಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ ಈರಣ್ಣ ಕಡಾಡಿ ಅವರು, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಭಾಗದ ಬಿಜೆಪಿ ವಿಭಾಗೀಯ ಪ್ರಭಾರಿಯಾಗಿದ್ದಾರೆ.

ಬಿಜೆಪಿ ಎರಡನೇ ಅಭ್ಯರ್ಥಿ ಅಶೋಕ ಗಸ್ತಿ: ರಾಯಚೂರು ಮೂಲದ ಅಶೋಕ ಗಸ್ತಿಯವರಿಗೆ ರಾಜ್ಯಸಭಾ ಟಿಕೆಟ್ ಘೋಷಣೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ನಡೆ ಪ್ರದರ್ಶನ ಮಾಡಿದೆ. ಎಬಿವಿಪಿ, ಆರ್ ಎಸ್ ಎಸ್ ನಂತರ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಂತರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದರು. ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿಯಾಗಿಯೂ ಗಸ್ತಿ ಅವರು ಕಾರ್ಯ ನಿರ್ವಹಿಸಿದ್ದಾರೆ. ಪಕ್ಷದ ಶಿಸ್ತಿನ ಸಿಪಾಯಿಯಾಗಿರುವ ಗಸ್ತಿ ಅವರು ಬಿಜೆಪಿಗಾಗಿ ಹಗಲಿರುಳು ಶ್ರಮಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಸದ್ಯ ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಹೊಂದಿದವರು.

English summary
Here's a look at Ashok Gasti and Eerana Kadadi, BJP's candidates for the Rajya Sabha election,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X