ವಿಧಾನಸಭೆ ಚುನಾವಣೆಗೆ ಮೊದಲು ರಾಜ್ಯಸಭೆ ಚುನಾವಣೆ?
ಬೆಂಗಳೂರು, ಫೆಬ್ರವರಿ 6 : ಕರ್ನಾಟಕ ವಿಧಾನಸಭೆ ಚುನಾವಣೆಗೂ ಮೊದಲೇ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ವಿಧಾನಸಭೆಯ ಸದಸ್ಯರು ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಳಿಸಲಿದ್ದಾರೆ.
ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಚುನಾವಣೆ ನಡೆಸುವ ಸಾಧ್ಯತೆ ಇದೆ. ಏಪ್ರಿಲ್ 2ಕ್ಕೆ ನಾಲ್ವರು ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ.
ವಿಧಾನಸಭೆ ಚುನಾವಣೆ ಬಳಿಕ ರಾಜ್ಯಸಭೆ ಚುನಾವಣೆ ನಡೆಸಿದರೆ ಸುಮಾರು ಒಂದೂವರೆ ತಿಂಗಳ ಕಾಲ ನಾಲ್ಕು ಸ್ಥಾನಗಳು ಖಾಲಿ ಉಳಿಯುತ್ತವೆ. ಆದ್ದರಿಂದ, ಅವಧಿಗೂ ಮೊದಲೇ ಚುನಾವಣೆ ನಡೆಸುವ ಕುರಿತು ಚಿಂತನೆ ನಡೆದಿದೆ.

2012ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಕೆ.ರೆಹಮಾನ್ ಖಾನ್ (ಕಾಂಗ್ರೆಸ್), ಎಂ.ರಾಜೀವ್ ಚಂದ್ರಶೇಖರ್ (ಪಕ್ಷೇತರ), ಬಸವರಾಜ ಪಾಟೀಲ್ ಸೇಡಂ (ಬಿಜೆಪಿ), ಆರ್.ರಾಮಕೃಷ್ಣ (ಬಿಜೆಪಿ) ಅವರ ಅವಧಿ ಪೂರ್ಣಗೊಳ್ಳಲಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ತಮಗಿರುವ ಸದಸ್ಯ ಬಲದ ಆಧಾರದ ಮೇಲೆ ಇಬ್ಬರು ಸದಸ್ಯರನ್ನು ಆರಿಸಿ ಕಳಿಸಬಹುದಾಗಿದೆ. ಜೆಡಿಎಸ್‌ನ ಏಳು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ. ಆದ್ದರಿಂದ, ಅವರೂ ಇನ್ನೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿಲ್ಲ.











Click it and Unblock the Notifications