Breaking: ಕರ್ನಾಟಕದಿಂದ ರಾಜ್ಯಸಭೆಗೆ ಜೈರಾಮ್ ರಮೇಶ್‌ಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು, ಮೇ 29: ಕರ್ನಾಟಕದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಈ ಬಾರಿ ರಾಜ್ಯದಿಂದ ಕಾಂಗ್ರೆಸ್ ಅಭ್ಯರ್ಥಿ ಆಗಿ ಜೈರಾಮ್ ರಮೇಶ್ ಅಖಾಡಕ್ಕೆ ಇಳಿಯಲಿದ್ದಾರೆ.
ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆಗೆ ಇನ್ನೂ ಮೂರು ದಿನ ಬಾಕಿ ಇರುವಂತೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ.

ಕರ್ನಾಟಕದಿಂದ ಕನ್ನಡದ ನಟ ಹಾಗೂ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾರತೀಯ ಜನತಾ ಪಕ್ಷವು ರಾಜ್ಯಸಭೆ ಟಿಕೆಟ್ ಘೋಷಿಸಿದೆ.

Rajya Sabha Election: Congress Approved ticket to Jairam Ramesh from Karnataka

ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೈರಾಮ್ ರಮೇಶ್:
ಕರ್ನಾಟಕದಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಪೈಕಿ ಕಾಂಗ್ರೆಸ್‌ಗೆ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಬಿಜೆಪಿಗೆ ಎರಡು ಸ್ಥಾನಗಳು ನಿಶ್ಚಿತವಾಗಿವೆ. ಇನ್ನೊಂದು ಸ್ಥಾನಕ್ಕೆ ಮಾತ್ರ ಅತಂತ್ರ ಸ್ಥಿತಿಯಲ್ಲಿದೆ. ಜೆಡಿಎಸ್ ಬೆಂಬಲ ಇದ್ದವರಿಗೆ ಆ ಸ್ಥಾನ ಸಿಗಲಿದೆ. ಜೆಡಿಎಸ್ ಆ ಒಂದು ಸ್ಥಾನದ ನಿರೀಕ್ಷೆಯಲ್ಲಿದೆ. ಬಿಜೆಪಿ ಮೂರು ಅಭ್ಯರ್ಥಿಗಳನ್ನು ನಿಲ್ಲಿಸಿದರೆ ಜೆಡಿಎಸ್‌ಗೆ ಕಷ್ಟವಾಗುತ್ತದೆ. ಹೀಗಾಗಿ, ಮೂರನೇ ಅಭ್ಯರ್ಥಿ ನಿಲ್ಲಿಸಬೇಡಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಬಿಜೆಪಿಯ ವರಿಷ್ಠರನ್ನು ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ಜೈರಾಮ್ ರಮೇಶ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

Rajya Sabha Election: Congress Approved ticket to Jairam Ramesh from Karnataka

15 ರಾಜ್ಯಗಳ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ:
ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ತಲಾ ಆರು ಸ್ಥಾನಗಳಿವೆ. ಬಿಹಾರದಲ್ಲಿ ಐದು, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ನಾಲ್ಕು ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ.

Rajya Sabha Election: Congress Approved ticket to Jairam Ramesh from Karnataka

ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದಕ್ಕಬಹುದು?:
57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ರಾಜಸ್ಥಾನದಲ್ಲಿ 2, ಛತ್ತೀಸ್‌ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್‌ಗೆ ದಕ್ಕಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+