• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ರಾಜ್ಯಸಭೆ ಚುನಾವಣೆ: ಜೈರಾಮ್‌ ರಮೇಶ್‌ ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಮೇ 30: ರಾಜ್ಯಸಭೆ ಚುನಾವನೆಗೆ ಕರ್ನಾಟಕ ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿರುವ ಜೈರಾಮ್ ರಮೇಶ್ ಅವರು ನಾಮಪತ್ರ ಸಲ್ಲಿಕೆ ಮಾಡಿದರು.

ವಿಧಾನಸಬೆಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಜೈರಾಮ್ ರಮೇಶ್ ನಾಮಪತ್ರ ಸಲ್ಲಿಸಿದರು.

Breaking: ಕರ್ನಾಟಕದಿಂದ ರಾಜ್ಯಸಭೆಗೆ ಜೈರಾಮ್ ರಮೇಶ್‌ಗೆ ಕಾಂಗ್ರೆಸ್ ಟಿಕೆಟ್Breaking: ಕರ್ನಾಟಕದಿಂದ ರಾಜ್ಯಸಭೆಗೆ ಜೈರಾಮ್ ರಮೇಶ್‌ಗೆ ಕಾಂಗ್ರೆಸ್ ಟಿಕೆಟ್

ಇದಕ್ಕೂ ಮುನ್ನ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಜೈರಾಮ್ ರಮೇಶ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸೋಮವಾರ 'ಬಿ' ಫಾರಂ ನೀಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾದ ಮನ್ಸೂರ್ ಅಲಿ ಖಾನ್ ಅವರಿಗೂ 'ಬಿ' ಫಾರಂ ವಿತರಿಸಲಾಯಿತು.

ಕರ್ನಾಟಕದಿಂದ 2016ರಲ್ಲಿ ಕಾಂಗ್ರೆಸ್‌ನಿಂದಲೇ ಆಯ್ಕೆಯಾಗಿರುವ ಜಯರಾಮ್ ರಮೇಶ್ ಅವರನ್ನು ಮತ್ತೊಮ್ಮೆ ಕರ್ನಾಟಕದಿಂದಲೇ ಆಯ್ಕೆ ಮಾಡಲಾಗುತ್ತಿದೆ. ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಮೇ 29ರಂದು ಬಿಡುಗಡೆ ಮಾಡಿದ್ದು, ಜಯರಾಮ್ ರಮೇಶ್ ಅವರ ಹೆಸರನ್ನು ಘೋಷಿಸಿತ್ತು.

ರಾಜ್ಯಸಭೆ ಚುನಾವಣೆ:

ಕರ್ನಾಟಕ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆಗೊಂಡ ನಾಲ್ಕು ಸದಸ್ಯರುಗಳು ಅಂದರೆ ನಿರ್ಮಲಾ ಸೀತಾರಾಮನ್, ಜಯರಾಂ ರಮೇಶ್, ಕೆ.ಸಿ. ರಾಮಮೂರ್ತಿ ಜೂನ್ 30ರಂದು ನಿವೃತ್ತರಾಗಲಿದ್ದಾರೆ. ಇದಲ್ಲದೆ, ಆಸ್ಕರ್ ಫರ್ನಾಂಡಿಸ್ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಸೇರಿ ಪಟ್ಟು ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಚುನಾವಣಾ ವೇಳಾಪಟ್ಟಿಯಂತೆ ಮೇ 24ರ ಮಂಗಳವಾರದಂದು ಅಧಿಸೂಚನೆಯನ್ನು ಹೊರಡಿಸಿದ್ದು, ಮೇ 31ರ ಮಂಗಳವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಜೂನ್ 01ರ ಬುಧವಾರದಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಜೂನ್ 03ರ ಶುಕ್ರವಾರದಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅವಶ್ಯವಿದ್ದಲ್ಲಿ ಜೂನ್ 10ರ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಮತದಾನವನ್ನು ನಡೆಸಲಾಗುವುದು. 2022ರ ಜೂನ್ 10ರ ಶುಕ್ರವಾರ ಸಂಜೆ 5:00 ಗಂಟೆಯಿಂದ ಮತಗಳ ಏಣಿಕೆ ನಡೆಯಲಿದ್ದು, ಜೂನ್ 13ರ ಸೋಮವಾರದಂದು ಚುನಾವಣೆ ಮುಕ್ತಾಯಗೊಳ್ಳಲಿದೆ.

English summary
Rajya Sabha Election: Congress Candidate Jairam ramesh file nomination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X