ಕಾಂಗ್ರೆಸ್, ಜೆಡಿಎಸ್‌ನಿಂದ ರಾಜ್ಯಸಭೆಗೆ ಅಭ್ಯರ್ಥಿ ಯಾರು?

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಮೇ 24 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಅಭ್ಯರ್ಥಿಯನ್ನು ಅಂತಿಗೊಳಿಸಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ.

ಜೂನ್ 11ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಬಿಜೆಪಿ ಈಗಾಗಲೇ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರನ್ನು ಅಭ್ಯರ್ಥಿ ಎಂದು ನಿರ್ಧರಿಸಿದ್ದು, ಹೈಕಮಾಂಡ್ ನಾಯಕರಿಗೆ ಈ ಕುರಿತು ಪ್ರಸ್ತಾವನೆಯನ್ನು ಕಳಿಸಿದೆ. [ಕರ್ನಾಟಕದಿಂದ ರಾಜ್ಯಸಭೆಗೆ ಮತ್ತೆ ಎಂ ವೆಂಕಯ್ಯನಾಯ್ಡು]

congress

ಕಾಂಗ್ರೆಸ್ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿದೆ. ಜೆಡಿಎಸ್‌ ಪಕ್ಷದಿಂದ ಒಬ್ಬರು ಆಯ್ಕೆಯಾಗಬಹುದು. ಕಾಂಗ್ರೆಸ್‌ನಿಂದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬರುತ್ತಿವೆ. ಜೆಡಿಎಸ್‌ನಿಂದ ಉದ್ಯಮಿಯೊಬ್ಬರು ಆಯ್ಕೆಯಾಗುವ ಸೂಚನೆ ಸಿಕ್ಕಿದೆ. [ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸಿನಲ್ಲಿ ಪೈಪೋಟಿ]

ಯಾರ ಹೆಸರು ಕೇಳಿಬರುತ್ತಿದೆ : ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಲು ಐವರ ಹೆಸರು ಕೇಳಿಬರುತ್ತಿದೆ. ಮಾಜಿ ಕೇಂದ್ರ ಸಚಿವರಾದ ಪಿ.ಚಿದಂಬರಂ, ಆಸ್ಕರ್ ಫರ್ನಾಂಡೀಸ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಸಚಿವೆ ರಾಣಿ ಸತೀಶ್ ಹೆಸರು ಕೇಳಿ ಬರುತ್ತಿದೆ. [ಕುಮಾರಸ್ವಾಮಿ ರಾಜ್ಯಸಭೆಗೆ, ಗೌಡರ ಸ್ಪಷ್ಟನೆಗಳು]

ನಾಯ್ಡು ಅಂತಿಮವೇ? : ಕರ್ನಾಟಕದಿಂದ ರಾಜ್ಯಸಭೆಗೆ ಹೊರರಾಜ್ಯದವರನ್ನು ಆಯ್ಕೆ ಮಾಡಬಾರದು ಎಂದು ಸಾಮಾಜಿಕ ಜಾಲ ತಾಣದಲ್ಲಿ ದೊಡ್ಡ ಅಭಿಯಾನ ನಡೆದಿತ್ತು. ಅದರಲ್ಲೂ ವೆಂಕಯ್ಯ ನಾಯ್ಡು ಅವರಿಗೆ 4ನೇ ಬಾರಿಗೆ ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತವಾಗಿತ್ತು. [#VenkayyaSakayya ಎಂದ ರೊಚ್ಚಿಗೆದ್ದ ಕನ್ನಡಿಗರು]

ಆದರೆ, ಬಿಜೆಪಿ ನಾಯಕರು ವೆಂಕಯ್ಯ ನಾಯ್ಡು ಅವರ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ನಾಯಕರು ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.

ಉದ್ಯಮಿ ರಾಜ್ಯಸಭೆಗೆ : ಇನ್ನೂ ಒಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿರುವ ಜೆಡಿಎಸ್ ಉದ್ಯಮಿಯೊಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಮಂಗಳೂರು ಮೂಲದ ಉದ್ಯಮಿ ಎಂ.ಎ.ಫಾರೂಕ್ ಅವರು ಈಗಾಗಲೇ ಕುಮಾರಸ್ವಾಮಿ ಅವರು ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡ ದಯಾನಂದ ರೆಡ್ಡಿ ಅವರಿಗೆ ಜೆಡಿಎಸ್ ಅವಕಾಶ ನೀಡಲಿದೆ ಎಂಬ ಸುದ್ದಿಗಳು ಇವೆ.

ಆಸ್ಕರ್ ಫರ್ನಾಂಡೀಸ್ (ಕಾಂಗ್ರೆಸ್), ಆಯನೂರು ಮಂಜುನಾಥ್ (ಬಿಜೆಪಿ), ಎಂ. ವೆಂಕಯ್ಯ ನಾಯ್ಡು (ಬಿಜೆಪಿ) ಅವರ ಅವಧಿ ಮುಗಿಯಲಿದ್ದು, ಮೂರು ಸ್ಥಾನಗಳು ತೆರವಾಗಲಿವೆ. ಉದ್ಯಮಿ ವಿಜಯ್ ಮಲ್ಯ ಅವರ ರಾಜೀನಾಮೆಯಿಂದ
ಒಂದು ಸ್ಥಾನ ಖಾಲಿಯಾಗಿದ್ದು, ಒಟ್ಟು 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The race for the Rajya Sabha from Karnataka is hotting up. While the BJP has made it clear that it would send Venkaiah Naidu to the upper house. JDS and the Congress is yet to decide on the candidates.
Please Wait while comments are loading...