ರಾಜ್ಯಸಭೆ ಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಸಿಗಲಿದ್ಯಾ ರಾಜ್ಯಸಭೆ ಸ್ಥಾನ?
ಬೆಂಗಳೂರು, ಫೆಬ್ರವರಿ 09: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿದೆ. ಇತ್ತ ರಾಜ್ಯಸಭೆ ಚುನಾವಣೆ ಫೆಬ್ರವರಿ 27 ರಂದು ನಡೆಯಲಿದ್ದು, ನಾಲ್ಕು ಸ್ಥಾನಗಳಲ್ಲಿ ಒಂದು ಸ್ಥಾನ ಬಿಜೆಪಿಗೆ ಸಿಗಲಿದ್ದು, ಎರಡನೇ ಸ್ಥಾನಕ್ಕೆ ಕಮಲ-ದಳ ನಾಯಕರು ತಂತ್ರಗಾರಿಕೆ ನಡೆಸಿದ್ದಾರೆ.
ಹೌದು, ಒಂದು ರಾಜ್ಯಸಭಾ ಸ್ಥಾನ ಪಡೆಯುವಷ್ಟು ಮತಗಳನ್ನು ಹೊಂದಿರುವ ಬಿಜೆಪಿ, ಜೆಡಿಎಸ್ ಜೊತೆಗೆ ಸೇರಿಕೊಂಡು ಎರಡನೇ ಸ್ಥಾನಕ್ಕೆ ಚಿಂತನೆ ನಡೆಸಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನ ಮಾತ್ರ ಬಿಜೆಪಿ ಗೆಲ್ಲಲು ಅವಕಾಶ ಇದೆ. ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರೇ ಮತ್ತೆ ಅಭ್ಯರ್ಥಿಯಾಗುತ್ತಾರಾ ಎನ್ನುವ ಕುರಿತು ಹಲವು ಚರ್ಚೆಗಳು ನಡೆಯುತ್ತಿದೆ.

ಇತ್ತ ಸಿಗುವ ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಬಿಜೆಪಿ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಜ್ಯಸಭಾ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ತಕ್ಷಣಕ್ಕೆ ಯಾವುದೇ ಶಿಫಾರಸು ಮಾಡದೇ ಇರುವ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ರಾಜ್ಯಸಭೆಗೆ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರು ಬಿಜೆಪಿ ಸಭೆಯಲ್ಲಿ ಚರ್ಚೆಯಾಗಿದೆ. ಇನ್ನೂ ಲೋಕಸಭಾ ಚುನಾವಣೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಆಫರ್ ನೀಡಿದ್ದು, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಾಳ ಹಾಕಿದ್ರು ಎನ್ನುವ ಮಾತುಗಳು ಕೇಳಿ ಬಂದಿತ್ತು.
ಅಲ್ಲದೇ ಕೆಲ ತಿಂಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ತೇಜಸ್ವಿನಿ ಅನಂತ್ ಕುಮಾರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ರಾಜ್ಯಸಭೆಗೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರು ಕೇಳಿ ಬಂದಿದೆ ಎಂದು ಹೇಳಲಾಗಿದೆ.

ಇನ್ನೂ ಈ ಕುರಿತು ಮಾಜಿ ಸಚಿವರಾದ ಸಿ ಟಿ ರವಿ ಅವರು ಮಾತನಾಡಿ, ಮೊದಲ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಏನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಮಾಡ್ತೇವೆ. ಆದರೆ, ಎರಡನೇ ಅಭ್ಯರ್ಥಿ ಯಾರು ಎಂಬ ಬಗ್ಗೆ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಚರ್ಚೆ ನಡೆಸಿ ನಿರ್ಣಯವನ್ನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನ ಮಾತ್ರ ಬಿಜೆಪಿ ಗೆಲ್ಲಲು ಅವಕಾಶ ಇದೆ. ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರೇ ಮತ್ತೆ ಅಭ್ಯರ್ಥಿಯಾಗುವುದಾದರೆ ಇಲ್ಲಿ ಯಾವುದೇ ಚರ್ಚೆ ಬೇಡ. ಒಂದು ವೇಳೆ ಬೇರೆಯವರು ಅಭ್ಯರ್ಥಿಯಾಗುವುದು ಅಂತಾದರೆ ಮಾತ್ರ ಮತ್ತೊಮ್ಮೆ ಚರ್ಚೆ ಮಾಡೋಣ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ಎರಡೂ ಸ್ಥಾನಗಳನ್ನು ಗೆಲ್ಲುವುದಕ್ಕೆ ನಮಗೆ 92 ಮತಗಳ ಅಗತ್ಯವಿದೆ. ಬಿಜೆಪಿ - ಜೆಡಿಎಸ್ ಮೈತ್ರಿ ಶಾಸಕರ ಬಲ 85-86 ಆಗಿವೆ. 2ನೇ ಅಭ್ಯರ್ಥಿ ಗೆಲ್ಲಿಸಲು ನಮಗೆ ಇನ್ನೂ ಆರು ಮತಗಳ ಕೊರತೆ ಬೀಳುತ್ತವೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರದ ಜೊತೆ ಸಮಾಲೋಚನೆ ಮಾಡಿ, ಎರಡನೇ ಅಭ್ಯರ್ಥಿ ಹಾಕುವ ಬಗ್ಗೆ ನಿರ್ಧಾರ ಮಾಡ್ತೇವೆ ಎಂದು ಹೇಳಿದರು.
ಹೈಕಮಾಂಡ್ ನಾಯಕರು ಸೂಚಿಸಿದರೆ ತೇಜಸ್ವಿನಿ ಅನಂತ್ ಕುಮಾರ್ ಹೆಸರು ಸೂಚಿಸುವಂತೆ ಪ್ರಸ್ತಾಪ ಮಾಡಲಾಗಿದೆ. ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಸಾಕಷ್ಟು ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅನಂತ್ ಕುಮಾರ್ ನಿಧನದ ಬಳಿಕ ನಿರ್ಲಕ್ಷ್ಯ ಮಾಡಿದ ಆರೋಪವೂ ಇದೆ. ಇದೇ ಕಾರಣದಿಂದ ರಾಜೀವ್ ಚಂದ್ರಶೇಖರ್ ಹೆಸರಿನ ಜೊತೆಗೆ ತೇಜಸ್ವಿನಿ ಅನಂತ್ ಕುಮಾರ್ ಹೆಸರು ಶಿಫಾರಸು ಮಾಡಬೇಕು ಎನ್ನು ಲೆಕ್ಕಾಚಾರವನ್ನ ರಾಜ್ಯ ಬಿಜೆಪಿ ನಾಯಕರು ಹಾಕಿಕೊಂಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications