• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಲಪಾಡ್‌ಗೆ ಹಿನ್ನಡೆ: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆ

|

ಬೆಂಗಳೂರು,ಫೆಬ್ರವರಿ 04: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಮಾಜಿ ಸಚಿವ ಎಂ.ಆರ್ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದೀಗ ರಕ್ಷಾ ರಾಮಯ್ಯ 56,271 ಮತಗಳು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಎಚ್‌ಎಸ್ ಮಂಜುನಾಥ್ 18,137 ಮತಗಳನ್ನು ಪಡೆದರೆ, ಮೊಹಮ್ಮದ್ ನಲಪಾಡ್ ಫಲಿತಾಂಶವನ್ನೇ ತಡೆಹಿಡಿಯಲಾಗಿದೆ.

ನಲಪಾಡ್ ಅವರು ರಾಮಯ್ಯ ಅವರಿಗಿಂತ ಹೆಚ್ಚಿನ ಮತಗಳನ್ನು ಪಡೆದಿದ್ದರೂ ರಕ್ಷಾ ರಾಮಯ್ಯ ಅವರು ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ 7 ಮಂದಿ ನಾಮಪತ್ರ ಸಲ್ಲಿಸಿದ್ದರು. ಮಿಥುನ್ ರೈ ಕಣದಿಂದ ಹಿಂದೆ ಸರಿದಿದ್ದರಿಂದ ಆರು ಜನರು ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದರು.

   ಯಾವ ಯಾವ ದೇಶಕ್ಕೆ ರಫ್ತು ಮಾಡ್ತೀವಿ ಗೊತ್ತಾ? | Oneindia Kannada

   ಇವರಲ್ಲಿ ಶಾಂತಿನಗರ ಶಾಸಕ ಎನ್‌ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಎಚ್‌ಎಸ್ ಮಂಜುನಾಥ್ ಹಾಗೂ ರಕ್ಷಾ ರಾಮಯ್ಯ ನಡುವೆ ತೀವ್ರ ಪೈಪೋಟಿ ಇತ್ತು. ಎರಡನೇ ಅತಿ ಹೆಚ್ಚು ಮತ ಗಳಿಸಿದ ವಿದ್ಯಾರ್ಥಿ ಘಟಕದ ಮಾಜಿ ಅಧ್ಯಕ್ಷ ಎಚ್‌ ಎಸ್ ಮಂಜುನಾಥ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

   English summary
   In a controversial result, Congress leader Raksha Ramaiah has won the presidential election to the Karnataka Pradesh Youth Congress Committee (KPYCC) despite ending up second in the race behind Mohammed Haris Nalapad, who was disqualified at the last minute.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X