ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜೆ

|
Google Oneindia Kannada News

ಬೆಂಗಳೂರು, ಆಗಸ್ಟ್ 04 : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಶಂಕು ಸ್ಥಾಪನೆ ಮಾಡಲಾಗುತ್ತದೆ. ಕರ್ನಾಟಕದ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

Recommended Video

Bengaluru Commissioner Kamal Pant Quarantine | Oneindia Kannada

ಮಂಗಳವಾರ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ. ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಬುಧವಾರ ವಿಶೇಷ ಪೂಜೆ ಮಾಡಲಾಗುತ್ತದೆ.

ರಾಮ ಮಂದಿರ ಭೂಮಿ ಪೂಜೆ; ಬಿಜೆಪಿ ಕಾರ್ಯಕರ್ತರಿಗೆ ಸಂದೇಶ ರಾಮ ಮಂದಿರ ಭೂಮಿ ಪೂಜೆ; ಬಿಜೆಪಿ ಕಾರ್ಯಕರ್ತರಿಗೆ ಸಂದೇಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಶಂಕು ಸ್ಥಾಪನೆ ಮಾಡಲಾಗುತ್ತದೆ. ಬುಧವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 12ರ ತನಕ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ.

ರಾಮ ಮಂದಿರ ಭೂಮಿ ಪೂಜೆ: ಅಯೋಧ್ಯೆಯಲ್ಲಿ ಮೋದಿಯ ವೇಳಾಪಟ್ಟಿರಾಮ ಮಂದಿರ ಭೂಮಿ ಪೂಜೆ: ಅಯೋಧ್ಯೆಯಲ್ಲಿ ಮೋದಿಯ ವೇಳಾಪಟ್ಟಿ

Ram Mandir Bhoomi Puja Special Prayers In Temples

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಿಂದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಯೋಧ್ಯೆಯ ರಾಮ-ಲಕ್ಷ್ಮಣರ ಮೂರ್ತಿಗೆ ಮೀಸೆ ಕಡ್ಡಾಯ! ಅಯೋಧ್ಯೆಯ ರಾಮ-ಲಕ್ಷ್ಮಣರ ಮೂರ್ತಿಗೆ ಮೀಸೆ ಕಡ್ಡಾಯ!

ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿ ದೀಪಗಳನ್ನು ಹಚ್ಚಿ ಪೂಜೆ ಸಲ್ಲಿಸಬೇಕು ಎಂದು ಸಂದೇಶ ನೀಡಲಾಗಿದೆ. ಬೆಳ್ಳಿ ಇಟ್ಟಿಗೆಯನ್ನು ಇಟ್ಟು ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಾಗುತ್ತದೆ.

ಅಯೋಧ್ಯೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಯೋಧ್ಯೆಯ 5 ಕಿ. ಮೀ. ದೂರದಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ. ದೇಶದ ವಿವಿಧ ಪುಣ್ಯ ಕ್ಷೇತ್ರಗಳ ಮಣ್ಣು, ನೀರನ್ನು ತೆಗೆದುಕೊಂಡು ಹೋಗಲಾಗಿದೆ.

English summary
Special puja in Karnataka temples on August 5, 2020 on the occasion of Ram Mandir Bhoomi Puja at Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X