ಅಯೋಧ್ಯೆ ಶ್ರೀ ರಾಮ ಮಂದಿರ ಉದ್ಘಾಟನೆ; ಶೃಂಗೇರಿ ಮಠದ ಸ್ಪಷ್ಟನೆ
ಚಿಕ್ಕಮಗಳೂರು, ಜನವರಿ 09: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ, ದೇಶದ ಜನರು ಈ ಸಂಭ್ರಮದ ಕ್ಷಣಕ್ಕಾಗಿ ಕಾದು ಕುಳಿತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಪೀಠ ಪ್ರಕಟಣೆಯೊಂದರಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ಬಗ್ಗೆ ಸ್ಪಷ್ಟನೆಯೊಂದನ್ನು ನೀಡಿದೆ. ಆಡಳಿತಾಧಿಕಾರಿಗಳು ಶ್ರೀಮಠ ಶೃಂಗೇರಿ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

ಮಠದ ಪ್ರಕಟಣೆ; ಆಸ್ತಿಕ ಜನರೆಲ್ಲರ ಗಮನಕ್ಕೆ ಒಂದು ಮುಖ್ಯವಾದ ವಿಷಯ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ.
ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ಈ ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ.
ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ.
ಆದರೆ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು ಎಂದು ಮನವಿ ಮಾಡಲಾಗಿದೆ.
ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.
"sharadapeetham" ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.
ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರು ಮಹಾಸ್ವಾಮಿಗಳವರು ಆಶೀರ್ವದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಅಂದು ವಿಶೇಷ ಪೂಜೆಯನ್ನು ಜನಡೆಸಲಾಗುತ್ತದೆ. ಈ ಕುರಿತು ಮುಜರಾಯಿ ಇಲಾಖೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಿದೆ.
ಸುತ್ತೋಲೆಯಲ್ಲಿ ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ 22/01/2024ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿದೆ. ಅಂದು ದೇಶದ/ ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ ಎಂದು ಹೇಳಿದೆ.
ಜನವರಿ 22ರಂದು ಅಯೋಧ್ಯೆಗೆ ಎಲ್ಲರೂ ಬರಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸಹ ಶ್ರೀ ರಾಮನ ಭಕ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ಈಗಾಗಲೇ ಮಂತ್ರಾಕ್ಷತೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದೆ. ರಾಮ ಮಂದಿರ ಉದ್ಘಾಟನೆ ವೇಳೆ ಎಲ್ಲರ ಮನೆಯ ಮುಂದೆ ದೀಪ ಬೆಳಗಬೇಕು ಎಂದು ಕರೆ ನೀಡಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications