ರಾಮ ಮಂದಿರ ನಿರ್ಮಾಣ : ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಬಾಣ!
Recommended Video

ಬೆಂಗಳೂರು, ನವೆಂಬರ್ 16 : 'ಬಿಜೆಪಿಗೆ ಅಯೋಧ್ಯೆಯ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಃ ರಾಮಮಂದಿರ ನಿರ್ಮಾಣವಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದಾರೆ.
ಶುಕ್ರವಾರ ಸಿದ್ದರಾಮಯ್ಯ ಅವರು ರಾಮ ಮಂದಿರ ನಿರ್ಮಾಣದ ವಿವಾದದ ಬಗ್ಗೆ ಸಾಲು-ಸಾಲು ಟ್ವೀಟ್ ಮಾಡಿದ್ದಾರೆ. 'ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ' ಎಂದು ದೂರಿದ್ದಾರೆ.
ಬುಧವಾರ ರಾತ್ರಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಂಗಳೂರಿಗೆ ಆಗಮಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಭೆಯಲ್ಲಿ ಅವರು ಪಾಲ್ಗೊಂಡಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಟ್ವೀಟ್‌ಗಳನ್ನು ಮಾಡಿದ್ದಾರೆ.
'ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನ ಬೆಂಬಲ ನೀಡುವುದಿಲ್ಲ' ಎಂದು ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ... ಸಿದ್ದರಾಮಯ್ಯ ಟ್ವೀಟ್ ಏನು?....
|
ಅಮಿತ್ ಶಾ, ಮೋದಿ ವಿರುದ್ಧ ಟೀಕೆ
ಅಮಿತ್ ಶಾ, ನರೇಂದ್ರ ಮೋದಿ ಕರ್ನಾಟಕದಲ್ಲಿ ಬಂದು ಮನೆ ಮಾಡಿದರೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನರು ಬೆಂಬಲ ನೀಡುವುದಿಲ್ಲ.
|
ರಾಮಮಂದಿರ ನಿರ್ಮಾಣ ಬೇಕಿಲ್ಲ
ಬಿಜೆಪಿಗೆ ಅಯೋಧ್ಯೆಯ ವಿವಾದ ಜೀವಂತವಾಗಿರುವುದು ಬೇಕಿದೆಯೇ ವಿನಃ ರಾಮಮಂದಿರ ನಿರ್ಮಾಣವಲ್ಲ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
|
ಹಿತರಕ್ಷಣೆಗೆ ಬದ್ಧನಾಗಿದ್ದೇನೆ
ನಾನು ರಾಜಕೀಯ ಜೀವನದಲ್ಲಿರುವವರೆಗೂ ಅಹಿಂದ ವರ್ಗದ ಹಿತರಕ್ಷಣೆಗೆ ಬದ್ಧನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅಮಿತ್ ಶಾ ಬಂದಿದ್ದರು
ಬುಧವಾರ ರಾತ್ರಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದರು. ಮಣ್ಣಗುಡ್ಡದಲ್ಲಿರುವ ಸಂಘ ನಿಕೇತನದಲ್ಲಿ ಆರ್‌ಎಸ್‌ಎಸ್ ನಾಯಕರ ಜೊತೆ ಸಭೆ ನಡೆಸಿದ್ದರು. ರಾಮಮಂದಿರ ನಿರ್ಮಾಣ, 2019ರ ಲೋಕಸಭೆ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಿದ್ದರು.












Click it and Unblock the Notifications