Ram Mandir: ರಾಮ ಮಂದಿರ ಉದ್ಘಾಟನೆ ಬಗ್ಗೆ ಬಿ ವೈ ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು, ಜನವರಿ 22: ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಅಸಾಧಾರಣ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಕೋಟಿ ಕೋಟಿ ರಾಮಭಕ್ತರ ಆಸೆ ಇವತ್ತು ಈಡೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಯೋಧ್ಯೆ ಮತ್ತು ಕನ್ನಡಿಗರಿಗೆ ಅವಿನಾಭಾವ ಸಂಬಂಧವಿದೆ. ಪ್ರತಿಯೊಬ್ಬ ಕನ್ನಡಿಗರೂ ಇಂದು ಹೆಮ್ಮೆ ಪಡುತ್ತಿದ್ದಾರೆ ಎಂದು ನುಡಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠೆ ಕಾರ್ಯ ನೆರವೇರಿದೆ. ಇದು ಅತ್ಯಂತ ಹೆಮ್ಮೆಯ ಮತ್ತು ಸಂತೋಷದ ವಿಚಾರ ಎಂದು ತಿಳಿಸಿದರು.

ಪ್ರತಿಯೊಬ್ಬ ಹಿಂದೂಗಳನ್ನು ಒಂದುಗೂಡಿಸುವ ಪವಿತ್ರ ಘಳಿಗೆ ಇಂದಿನದು. ಅಯೋಧ್ಯೆ, ಪ್ರಭು ಶ್ರೀರಾಮಚಂದ್ರನ ಜನ್ಮಸ್ಥಳ. ಪ್ರಭು ಶ್ರೀರಾಮಚಂದ್ರನ ಪರಮ ಭಕ್ತ ಹನುಮನ ಜನ್ಮಸ್ಥಳ ಕಿಷ್ಕಿಂಧೆ ಕರ್ನಾಟಕದಲ್ಲಿದೆ ಎಂದು ನೆನಪಿಸಿದರು.
ಬಲರಾಮನ ವಿಗ್ರಹಕ್ಕೆ ಶಿಲೆ ಕೂಡ ಕರ್ನಾಟಕದಿಂದ ಲಭಿಸಿದೆ. ಅದರ ಶಿಲ್ಪಿಗಳು ಕನ್ನಡನಾಡಿನವರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿರುವುದು ನಮ್ಮೆಲ್ಲರ ಸೌಭಾಗ್ಯ ಎಂದು ಅವರು ವಿಶ್ಲೇಷಿಸಿದರು. ವಿಜಯೇಂದ್ರ ಅವರು ಇಂದು ಮಹಾಲಕ್ಷ್ಮೀ ಲೇಔಟ್‍ನ ರಾಣಿ ಅಬ್ಬಕ್ಕ ಮೈದಾನದಲ್ಲಿ ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿμÁ್ಠಪನಾ ಪ್ರಯುಕ್ತ ನಡೆಯುವ "ಶ್ರೀರಾಮತಾರಕ ಮಹಾಯಾಗ-ಕಲಶಾಭಿμÉೀಕ" ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದರು.
ವಿಶೇಷ ಪೂಜೆಯಲ್ಲಿ ಭಾಗವಹಿಸಿದ ಯಡಿಯೂರಪ್ಪ
ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಗಳೂರು ಮಹಾನಗರ ವತಿಯಿಂದ ಬಾಣಸವಾಡಿಯ ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ನಂತರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ, ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂಭ್ರಮದ ವಾತಾವರಣ
ಅಯೋಧ್ಯೆಯಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂಭ್ರಮದ ವಾತಾವರಣವಿತ್ತು. ಕಾರ್ಯಕ್ರಮದ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು.
ಪ್ರಮುಖರಾದ ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ವೈ.ಎ.ನಾರಾಯಣಸ್ವಾಮಿ, ರಾಜ್ಯ ಖಜಾಂಚಿ ಸುಬ್ಬನರಸಿಂಹ, ಅಯೋಧ್ಯ ರಾಮಮಂದಿರ ದರ್ಶನ ಅಭಿಯಾನದ ಸಹ ಸಂಚಾಲಕ ಜಗದೀಶ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಸಹ ಕಾರ್ಯದರ್ಶಿ ವಿಶ್ವನಾಥ್ ಅಣಜಿ, ಮಲ್ಲೇಶ್ವರ ಮಂಡಲ ಅಧ್ಯಕ್ಷರಾದ ಶ್ರೀಮತಿ ಕಾವೇರಿ ಕೇದಾರನಾಥ್, ಕಾರ್ಯಕರ್ತರು ಸಂಭ್ರಮೋಲ್ಲಾಸದಿಂದ ಭಾಗವಹಿಸಿದ್ದರು. ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಲಾಯಿತು.












Click it and Unblock the Notifications