ಶಕ್ತಿ ಯೋಜನೆ ವೆಚ್ಚದ ಬಗ್ಗೆ ಜನರಿಗೆ 'ಸತ್ಯ' ಹೇಳಿದ್ದೇನೆ: ಬೊಮ್ಮಾಯಿ ತಿರುಗೇಟು

ಬೆಂಗಳೂರು, ಆಗಸ್ಟ್ 03: ಕರ್ನಾಟಕದ ರಾಜ್ಯದ ಜನರ ದಾರಿ ತಪ್ಪಿಸಿ ರಾಜಕಾರಣ ಮಾಡುವ ಅವಶ್ಯಕತೆ ನನಗಿಲ್ಲ. ಸಾರಿಗೆ ಇಲಾಖೆಯ ಆದೇಶ ನೋಡಿಯೇ ರಾಜ್ಯದ ಜನತೆಗೆ ಸತ್ಯ ಹೇಳುವ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ತಿರುಗೇಟು ನೀಡಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರೇ ಶಕ್ತಿ ಯೋಜನೆ ಅಡಿ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ನಿಗಮದ ಬಸ್ ಗಳಲ್ಲಿ ಜೂನ್ ತಿಂಗಳಲ್ಲಿ 20 ದಿನ ಉಚಿತ ಪ್ರಯಾಣ ಮಾಡಿರುವುದರಿಂದ ನಾಲ್ಕು ಸಾರಿಗೆ ನಿಗಮಗಳಿಗೆ 250 ಕೋಟಿ ರೂಪಾಯಿ ವೆಚ್ಚವಾಗಿದೆ. ಪ್ರಯಾಣ ವೆಚ್ಚದ ಮರು ಪಾವತಿ ಮಾಡಲು ನಾಲ್ಕೂ ನಿಗಮಗಳಿಗೆ ಆಗಸ್ಟ್ 1 ರಂದು 125 ಕೋಟಿ ಬಿಡುಗಡೆ ಮಾಡಿ ನಿಮ್ಮದೇ ಇಲಾಖೆ ಆದೇಶ ಮಾಡಿದೆ ಎಂದು ಅವರು ವಿವರಿಸಿದರು.

Ramalinga Reddy Hitsback To Basavaraj Bommai Statement Of Transport Employees Half Salary

ಸಾರಿಗೆ ನಿಗಮಗಳ ಬೇಡಿಕೆಗೂ ಸರ್ಕಾರ ಬಿಡುಗಡೆ ಮಾಡಿರುವ ಅನುದಾನಕ್ಕೂ ಅರ್ಧದಷ್ಟು ಕಡಿಮೆ ಇದೆ. ಹೀಗಿರುವಾಗ ಮೊದಲೇ ನಷ್ಟದಲ್ಲಿ ನಡೆಯುತ್ತಿರುವ ಸಾರಿಗೆ ನಿಗಮಗಳಿಗೆ ಸಿಬ್ಬಂದಿ ಸಂಬಳ, ಬಸ್ ಗಳ ನಿರ್ವಹಣೆ, ಡಿಸೇಲ್ ಗೆ ಹಣದ ಕೊರತೆಯಾಗುವುದು ವಾಸ್ತವಿಕ ಸತ್ಯ ಎಂದು ತಿಳಿಸಿದರು.

ಶಕ್ತಿ ಯೋಜನೆಯಿಂದ ರಾಜ್ಯದ ಸಾರಿಗೆ ನಿಗಮಗಳಿಗೆ ಆರ್ಥಿಕ ತೊಂದರೆ ಆಗಿರುವ ಸತ್ಯವನ್ನೇ ನಾನು ರಾಜ್ಯದ ಜನತೆಗೆ ತಿಳಿಸಿದ್ದೇನೆ ಎಂದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿಯವರೇ ಶಕ್ತಿ ಯೋಜನೆ ಅಡಿ ರಾಜ್ಯದಲ್ಲಿ ಮಹಿಳೆಯರು ಸಾರಿಗೆ ನಿಗಮದ ಬಸ್ ಗಳಲ್ಲಿ ಜೂನ್ ತಿಂಗಳಲ್ಲಿ 20 ದಿನ ಉಚಿತ ಪ್ರಯಾಣ ಮಾಡಿರುವುದರಿಂದ ನಾಲ್ಕು ಸಾರಿಗೆ ನಿಗಮಗಳಿಗೆ 250 ಕೋಟಿ ರೂ. ವೆಚ್ಚವಾಗಿದ್ದು, ಪ್ರಯಾಣ ವೆಚ್ಚದ ಮರು ಪಾವತಿ ಮಾಡಲು ನಾಲ್ಕೂ ನಿಗಮಗಳಿಗೆ ಆಗಸ್ಟ್ 1 ರಂದು 125 ಕೋಟಿ ಬಿಡುಗಡೆ...

ರಾಜ್ಯ ಸಾರಿಗೆ ನಿಗಮಗಳ ನೌಕರರಿಗೆ ಅರ್ಧ ಸಂಬಳ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ರಾಮಲಿಂಗಾ ರೆಡ್ಡಿ ಅವರು, ಜನರಿಗೆ ಶಕ್ತಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡಬೇಡಿ ಎಂದು ಹೇಳಿದರು. ಸಾರಿಗೆ ನಿಗಮದ ನೌಕರರಿಗೆ ಎಂದಿನಿಂತೆ ಪೂರ್ಣ ವೇತನ ನೀಡಲಾಗಿದೆ. ಈ ವೇತನವು ಕೆಎಸ್‌ಆರ್‌ಟಿಸಿ ನಿಗಮಕ್ಕೆ ಮಾತ್ರ ಸಂಬಂಧಿಸಿದ, ಉಳಿದ ನಿಗಮಗಳಿಗೆ ಪ್ರತಿ ತಿಂಗಳಂತೆ 7 ನೇ ದಿನಾಂಕಕ್ಕೆ ವೇತನ ಪಾವತಿಯಾಗುತ್ತದೆ ಎಂದು ತಿಳಿಸಿದ್ದರು.

Ramalinga Reddy Hitsback To Basavaraj Bommai Statement Of Transport Employees Half Salary

ಅರ್ಧ ವೇತನ ಗ್ಯಾರಂಟಿ ಎಂದ ಬೊಮ್ಮಾಯಿ

ಈ ವಿಚಾರಕ್ಕೆ ಕುರಿತು ಗುರುವಾರ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇನ್ನೂ ಬುಧವಾರ ಈ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಫಲಶೃತಿಯಿಂದಾಗಿ ಸಾರಿಗೆ ನೌಕರರಿಗೆ ಅರ್ಧ ಸಂಬಳ ಮಾತ್ರ ಗ್ಯಾರೆಂಟಿ ಎಂದು ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು.

ಜೂನ್ 11ರಿಂದ ಶಕ್ತಿ ಯೋಜನೆ ಜಾರಿ ಆದ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಗ್ಯಾರೆಂಟಿ ಯೋಜನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ ಎಂಬ ಹೇಳಿಕೆ ಮೊದಲನೇ ತಿಂಗಳು ಹುಸಿಯಾಗಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಣಕ್ಕಾಗಿ NWKRTC ಯಿಂದ ಸರ್ಕಾರಕ್ಕೆ ಪತ್ರ

ಬೊಮ್ಮಾಯಿ ಅವರು ಹೇಳಿಕೆಗೆ ಪೂರಕವಾದ ಬೆಳವಣಿಗೆ ಒಂದು ನಡೆದಿದೆ. ಉತ್ತರ ಕರ್ನಾಟಕದ ಆರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ರಾಜ್ಯ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯವಸ್ಥಾಪಕ ನಿರ್ದೇಶಕರು ಶಕ್ತಿ ಯೋಜನೆಗೆ ಒಟ್ಟು 66 ಕೋಟಿ ರೂಪಾಯಿ ಖರ್ಚಾಗಿದ್ದು, ಇದರ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ. ಹಣ ನೀಡದಿದ್ದರೆ ನಿಗಮದ ಸಿಬ್ಬಂದಿ ವೇತನ ನೀಡುವುದು ಕಷ್ಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+