5,00,00,000 ವೆಚ್ಚದ ಹೊಸ RTO ಕಚೇರಿ ಉದ್ಘಾಟಿಸಿದ ರಾಮಲಿಂಗಾ ರೆಡ್ಡಿ: ಅಭಿವೃದ್ಧಿ ಯೋಜನೆಗಳ ಪಟ್ಟಿ

ಬೆಂಗಳೂರು, ಆಗಸ್ಟ್ 29: ಮೋಟಾರು ವಾಹನ ಕಾಯಿದೆ ಅನುಷ್ಠಾನ ಜವಾಬ್ದಾರಿ ನಿರ್ವಹಿಸುವ, ವಾಹನ ನೋಂದಣಿ ಹಾಗೂ ಚಾಲಕರಿಗೆ ಚಾಲನಾ ಪರವಾನಿಗೆ ನೀಡುವ ಸಾರಿಗೆ ಇಲಾಖೆಯಡಿ ಬರುವ ಸರ್ಕಾರಿ ಸಂಸ್ಥೆಯಾಗಿರುವ ಕರ್ನಾಟಕ ಪ್ರಾದೇಶಿಕ ಸಾರಿಗೆ ಕಚೇರಿ (RTO) ಸಂಸ್ಥೆ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಗತಿ ಆಗುತ್ತಿದೆ. ಈ ಪೈಕಿ ಕೆಜಿಎಫ್‌ನಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಛೇರಿ ಮತ್ತು ಸ್ವಯಂ ಚಾಲಿತ ಚಾಲನಾ ಪಥವನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು.

ಒಟ್ಟು ಸುಮಾರು 05 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪ್ರಾದೇಶಿಕ ಸಾರಿಗೆ ಕಛೇರಿ ಇದಾಗಿದೆ. ಅಷ್ಟೇ ಅಲ್ಲದೇ 05 ಕೋಟಿಗಳ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲಾನಾ ಪಥದ ಸಹ ನಿರ್ಮಿಸಲಾಗಿದೆ. ಅದು ಸಹ ಲೋಕಾರ್ಪಗೊಂಡಿದೆ. ಇದೇ ರೀತಿ ಸಾರಿಗೆ ಇಲಾಖೆಯ ಆರ್‌ಟಿಓ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಆಗುತ್ತಿದೆ. ಅವುಗಳ ಪಟ್ಟಿ ಇಲ್ಲಿದೆ.

Ramalinga Reddy Inaugurates New RTO Office and Driving Track Projects in State

* ಸಾರಿಗೆ ಇಲಾಖೆಯು (RTO) ಕರ್ನಾಟಕದಲ್ಲಿ 7 ಸ್ವಂತ ಕಚೇರಿ ಕಟ್ಟಡವನ್ನು ವೆಚ್ಚ 45.74 ಕೋಟಿ ರೂಪಾಯಿಗಳಲ್ಲಿ ಹೊಂದಿದೆ.

* ಪ್ರಾದೇಶಿಕ ಸಾರಿಗೆ ಕಚೇರಿ (RTO) 8‌ ಸ್ವಂತ ಕಟ್ಟಡ ಕಚೇರಿಗಳ ನಿರ್ಮಾಣಕ್ಕೆ 70. ಕೋಟಿ ರೂಪಾಯಿ ವ್ಯಯಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

* ಒಟ್ಟು 10.05 ಕೋಟಿ ರೂಪಾಯಿ ವೆಚ್ಚದಲ್ಲಿ ಮಧುಗಿರಿ ಮತ್ತು ಹೊನ್ನಾವರ ಕಚೇರಿ ಕಟ್ಟಡಗಳ ಕಾಮಗಾರಿಗಳನ್ನು ನಡೆಯುತ್ತಿದೆ. ಇವುಗಳ ಆಡಳಿತ ಕಾಯ ಶೀಘ್ರವೇ ಆರಂಭಗೊಳ್ಳಲಿದೆ.

* ಸ್ವಯಂ ಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ವಿವಿಧ 9ಕಡೆ ಚಾಲನಾ ಪಥಗಳ ನಿರ್ಮಾಣಕ್ಕೆ ವೆಚ್ಚ 44.21 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ.

* ರಾಜ್ಯದಲ್ಲಿ ಒಟ್ಟು 28 ಡ್ರೈವಿಂಗ್ ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿವೆ. ಅದಕ್ಕಾಗಿ ಒಟ್ಟು ವೆಚ್ಚ 203 ಕೋಟಿ ರೂಪಾಯಿ ವಿನಿಯೋಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಂದೊಂದಾಗೆ ಕಾಮಗಾರಿ ಪೂರ್ಣಗೊಳ್ಳಲಿವೆ.

* ರಾಜ್ಯದ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗ ಗಳಲ್ಲಿ 21 ಕೋಟಿ ರೂಪಾಯಿ ವೆಚ್ಚದಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಾಣ ಕೈಗೊಳ್ಳಲು ಉದ್ದೇಶ ಹೊಂದಲಾಗಿದೆ. ಕಾಮಗಾರಿ ಆರಂಭ ಯಾವಾಗ ಎಂಬುದು ತಿಳಿಬೇಕಿದೆ.

*ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಕ್ರಮ ವಹಿಸಲಾಗಿದೆ. ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಪಿ.ಪಿ.ಪಿ. ಅಡಿ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ಸರ್ಕಾರ ಮುಂದಾಗಿದೆ.

ಭಾರಿ ವಾಹನ ಚಾಲಕರ ತರಬೇತಿ ಕೇಂದ್ರಗಳು

60.76 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ರಾಜ್ಯದಲ್ಲಿ ಗುಣಮಟ್ಟದ ಚಾಲಕರನ್ನು ತರಬೇತಿಗೊಳಿಸುವ ನಿಟ್ಟಿನಲ್ಲಿ ಭಾರಿ ವಾಹನ ಚಾಲಕರ 4 ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಂದು ತರಬೇತಿ ಕೇಂದ್ರ ಕಾಮಗಾರಿ ಪ್ರಗತಿಯಲ್ಲಿದ್ದು, ಅದರ ವೆಚ್ಚ 6.50 ಕೋಟಿ ಎಂದು ರಾಜ್ಯ ಸಾರಿಗೆ ಇಲಾಖೆ ಮಾಹಿತಿ ನೀಡಿದೆ.

ಅದಲ್ಲದೇ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಯಾದ ವಿಜಯಪುರ, ಬಳ್ಳಾರಿ ಮತ್ತು ನಾಗಮಂಗಲ ಗಳಲ್ಲಿ ಭಾರಿ ವಾಹನ ಚಾಲಕರ ತರಬೇತಿ ಕೇಂದ್ರಗಳನ್ನು ನಿರ್ಮಿಸಲು ಪ್ಲಾನ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+