ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನಲ್ಲೇ ಇರುವೆ : ಕಾರ್ಯಕರ್ತರಿಗೆ ರಾಮಲಿಂಗಾ ರೆಡ್ಡಿ ಪತ್ರ

|
Google Oneindia Kannada News

ಬೆಂಗಳೂರು, ಜುಲೈ 17 : ಮಾಜಿ ಸಚಿವ, ಬಿ.ಟಿ.ಎಂ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆಯುತ್ತೇನೆ ಎಂದು ಘೋಷಣೆ ಮಾಡಿದರು. ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯುವ ಕುರಿತು ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ.

ರಾಮಲಿಂಗಾ ರೆಡ್ಡಿ ಬುಧವಾರ ರಾತ್ರಿ ಪತ್ರಿಕಾ ಪ್ರಕಟಣೆ ಮೂಲಕ ತಮ್ಮ ತೀರ್ಮಾನದ ಕುರಿತು ವಿವರಣೆ ನೀಡಿದ್ದಾರೆ. "ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ" ಎಂದು ಹೇಳಿದ್ದಾರೆ.

ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ರಾಮಲಿಂಗಾ ರೆಡ್ಡಿ?ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ರಾಮಲಿಂಗಾ ರೆಡ್ಡಿ?

"ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ" ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದ ರಾಮಲಿಂಗಾ ರೆಡ್ಡಿಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದ ರಾಮಲಿಂಗಾ ರೆಡ್ಡಿ

Ramalinga Reddy letter to party workers and leaders

ಪತ್ರಿಕಾ ಪ್ರಕಟಣೆ ಇಲ್ಲಿದೆ....

ಕಾಂಗ್ರೆಸ್ ಹೈಕಮಾಂಡ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಮಾಡುವ ವಿಜ್ಞಾಪನೆಗಳು...

ರಾಜೀನಾಮೆ ನೀಡಿದ್ದರೂ ಅಧಿವೇಶನಕ್ಕೆ ಹಾಜರಾಗುತ್ತಾರೆ ರಾಮಲಿಂಗಾ ರೆಡ್ಡಿರಾಜೀನಾಮೆ ನೀಡಿದ್ದರೂ ಅಧಿವೇಶನಕ್ಕೆ ಹಾಜರಾಗುತ್ತಾರೆ ರಾಮಲಿಂಗಾ ರೆಡ್ಡಿ

ಕರ್ನಾಟಕದಲ್ಲಿ ನಡೆಯುತ್ತಿರುವ ಬಹುತೇಕ ರಾಜಕೀಯ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಹೈ ಕಮಾಂಡ್ ಹಾಗೂ ಕಾರ್ಯಕರ್ತರಿಗೆ ಬಹುತೇಕ ಅರಿವಿದೆ.

ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ವಿದ್ಯಾಮಾನಗಳಿಂದ ಬೇಸರವಾಗಿ (ಕಾರಣಗಳನ್ನು ಅನೇಕ ಬಾರಿ ಮಾಧ್ಯಮ ಮುಖಾಂತರ ತಿಳಿಸಿದ್ದೇನೆ) ದಿನಾಂಕ 06-07-2019 ರಂದು ನಾನು ಆಯ್ಕೆಯಾಗಿರುವ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುತ್ತೇನೆ.

ನಾನೆಂದು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟವನಲ್ಲ ಸ್ಥಾನಮಾನ ಪಡೆಯಲು ನಾನು ಎಂದೂ ಆಸೆಪಟ್ಟವನಲ್ಲ. ಕಳೆದ 45 ವರ್ಷದ ಸುಧೀರ್ಘ ರಾಜಕೀಯ ಜೀವನದಲ್ಲಿ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ದಿಗಾಗಿ ಹಾಗೂ ನನ್ನ ಮತಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ.

ಕಾಂಗ್ರೆಸ್‍ನ ಹಲವಾರು ವಿದ್ಯಾಮಾನಗಳಿಂದ ಶಾಸಕ ಸ್ಥಾನಕ್ಕೆ ಮಾತ್ರ ನನ್ನ ರಾಜೀನಾಮೆ ಹೊರತು ಪಕ್ಷಕ್ಕಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಕಾಂಗ್ರೆಸ್‌ನ ಹಿರಿಯ ನಾಯಕರು ರಾಜೀನಾಮೆ ವಾಪಾಸ್ ಪಡೆದು ಪಕ್ಷದಲ್ಲಿರುವಂತೆ ಕೋರಿರುತ್ತಾರೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ವಾಪಾಸ್ ಪಡೆಯಲು ಮನವಿ ಮಾಡಿಕೊಂಡಿದ್ದಾರೆ.

ಈ ಎಲ್ಲ ಬೆಳವಣಿಗೆಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರೆಯಲು ತೀರ್ಮಾನಿಸಿದ್ದು ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುತ್ತಿದ್ದೇನೆ.

ತಮ್ಮ ವಿಶ್ವಾಸಿ
ರಾಮಲಿಂಗಾ ರೆಡ್ಡಿ

English summary
B.T.M.Layout Congress MLA and former minister Ramalinga Reddy letter to party workers and leaders. Ramalinga Reddy decided to stay in Congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X