ರಾಮಲಿಂಗಾ ರೆಡ್ಡಿ ಹೆಗಲಿಗೆ ಗೃಹ ಖಾತೆ?
Recommended Video

ಬೆಂಗಳೂರು, ಸೆಪ್ಟೆಂಬರ್ 01 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಮೂವರು ಸಚಿವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಗೃಹ ಖಾತೆಯನ್ನು ಯಾರಿಗೆ ನೀಡಲಾಗುತ್ತದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಸಂಜೆ 5 ಗಂಟೆಗೆ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ನಡೆಯಲಿದೆ. ವಿಧಾನಪರಿಷತ್ ಸದಸ್ಯರಾದ ಆರ್.ಬಿ.ತಿಮ್ಮಾಪುರ, ಎಚ್.ಎಂ.ರೇವಣ್ಣ, ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವ ಪ್ರಸಾದ್ ಸಂಪುಟ ಸೇರ್ಪಡೆಯಾಗಲಿದ್ದಾರೆ.

ಡಾ.ಜಿ.ಪರಮೇಶ್ವರ ರಾಜೀನಾಮೆ ಬಳಿಕ ಗೃಹ ಸಚಿವ ಸ್ಥಾನ ಖಾಲಿ ಇದ್ದು, ಸಿದ್ದರಾಮಯ್ಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಇಂದು ಸಂಪುಟ ವಿಸ್ತರಣೆ ಬಳಿಕ ಗೃಹ ಖಾತೆಯನ್ನು ಹಂಚಿಕೆ ಮಾಡಲಾಗುತ್ತದೆ. ಅರಣ್ಯ ಸಚಿವ ರಮಾನಾಥ್ ರೈ ಗೃಹ ಸಚಿವರಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಆದರೆ, ರಮಾನಾಥ ರೈ ಗೃಹ ಸಚಿವರಾದರೆ ಅದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. ಗುರುವಾರ ರಾತ್ರಿಯಿಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಗೃಹ ಸಚಿವರಾಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ರಾಮಲಿಂಗಾ ರೆಡ್ಡಿ ಗೃಹ ಸಚಿವರಾದರೆ, ಸಾರಿಗೆ ಖಾತೆಯನ್ನು ಎಚ್.ಎಂ.ರೇವಣ್ಣ ಅವರಿಗೆ ನೀಡಲಾಗುತ್ತದೆ ಎಂಬುದು ಸದ್ಯದ ಮಾಹಿತಿ.












Click it and Unblock the Notifications