ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ರಾಮಲಿಂಗಾ ರೆಡ್ಡಿ?

|
Google Oneindia Kannada News

Recommended Video

ರಾಜೀನಾಮೆಯನ್ನ ವಾಪಾಸ್ ಪಡೆಯಲಿದ್ದಾರೆ ರಾಮಲಿಂಗಾ ರೆಡ್ಡಿ |

ಬೆಂಗಳೂರು, ಜುಲೈ 17 : ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಸಭೆ ಫಲ ಕೊಟ್ಟಿದೆ. ಬಿ. ಟಿ. ಎಂ. ಕ್ಷೇತ್ರದ ಶಾಸಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ?.

ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, "ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಪಕ್ಷದಲ್ಲಿಯೇ ಇರುತ್ತೇನೆ. ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ," ಎಂದು ಹೇಳಿದರು.

ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದ ರಾಮಲಿಂಗಾ ರೆಡ್ಡಿಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದ ರಾಮಲಿಂಗಾ ರೆಡ್ಡಿ

"ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಸಹ ಕಾಂಗ್ರೆಸ್ ಪಕ್ಷದ ಬಗ್ಗೆಯಾಗಲಿ, ಸಮ್ಮಿಶ್ರ ಸರ್ಕಾರದ ಬಗ್ಗೆಯಾಗಲಿ ಯಾವುದೇ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿಲ್ಲ" ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ರಾಜೀನಾಮೆ ನೀಡಿದ್ದರೂ ಅಧಿವೇಶನಕ್ಕೆ ಹಾಜರಾಗುತ್ತಾರೆ ರಾಮಲಿಂಗಾ ರೆಡ್ಡಿರಾಜೀನಾಮೆ ನೀಡಿದ್ದರೂ ಅಧಿವೇಶನಕ್ಕೆ ಹಾಜರಾಗುತ್ತಾರೆ ರಾಮಲಿಂಗಾ ರೆಡ್ಡಿ

ಗುರುವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ರಾಮಲಿಂಗಾ ರೆಡ್ಡಿ ಅವರು ಸದನಕ್ಕೆ ಹಾಜರಾದರೆ ಸರ್ಕಾರದ ಪರವಾಗಿಯೇ ಮತ ಚಲಾವಣೆ ಮಾಡಲಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯಿಂದಾಗಿ ಕಾಂಗ್ರೆಸ್ ನಾಯಕರಿಗೆ ಸ್ಪಲ್ಪ ಸಮಾಧಾನವಾಗಿದೆ.

ನನಗೆ ಯಾವ ಸಚಿವ ಸ್ಥಾನ, ಹುದ್ದೆಯೂ ಬೇಕಿಲ್ಲ: ರಾಮಲಿಂಗಾ ರೆಡ್ಡಿನನಗೆ ಯಾವ ಸಚಿವ ಸ್ಥಾನ, ಹುದ್ದೆಯೂ ಬೇಕಿಲ್ಲ: ರಾಮಲಿಂಗಾ ರೆಡ್ಡಿ

ಸ್ಪೀಕರ್ ಜೊತೆ ಮಾತನಾಡುವೆ

ಸ್ಪೀಕರ್ ಜೊತೆ ಮಾತನಾಡುವೆ

ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, "ನಾನು ಕೆಲವು ಕಾರಣಗಳಿಂದಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ವಾಪಸ್ ಪಡೆಯುವುದು ಅಥವ ಪಡೆಯದಿರುವ ಬಗ್ಗೆ ಸ್ಪೀಕರ್‌ ಜೊತೆ ಗುರುವಾರ ಕರೆದಿರುವ ವಿಚಾರಣೆ ವೇಳೆ ಮಾತುಕತೆ ನಡೆಸುತ್ತೇನೆ," ಎಂದರು.

ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ

ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ

"ರಾಜಕೀಯದ ಬಗ್ಗೆ ನಾನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಗುರುವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ, ಸರ್ಕಾರದ ಬಗ್ಗೆ ನಾನು ವ್ಯತರಿಕ್ತ ಹೇಳಿಕೆ ನೀಡಿಲ್ಲ" ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದರು

ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದರು

ಭಾನುವಾರ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು.

ಜುಲೈ 6ರಂದು ರಾಜೀನಾಮೆ

ಜುಲೈ 6ರಂದು ರಾಜೀನಾಮೆ

ಜುಲೈ 6ರಂದು ರಾಮಲಿಂಗಾ ರೆಡ್ಡಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಇತರ ಶಾಸಕರ ಜೊತೆ ಮುಂಬೈಗೆ ಹೋಗದೆ ಬೆಂಗಳೂರಿನಲ್ಲಿಯೇ ಇದ್ದಾರೆ. ಜುಲೈ 15ರಂದು ವಿಚಾರಣೆಗೆ ಬರುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ನೋಟಿಸ್ ನೀಡಿದ್ದರೂ ರಾಮಲಿಂಗಾ ರೆಡ್ಡಿ ಅವರು ಗೈರಾಗಿದ್ದರು.

English summary
B.T.M.Layout Congress MLA and former minister Ramalinga Reddy may withdraw the resignation. On July 17, 2019 he announced that he will attend the assembly session on July 18. Chief Minister H.D.Kumaraswamy will go for floor test on 18th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X