• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮನಗರ ಅಭಿವೃದ್ಧಿ; ಬಹಿರಂಗ ಚರ್ಚೆಗೆ ಎಚ್‌ಡಿಕೆ ಆಹ್ವಾನ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02; 'ಬಿಜೆಪಿ ಸರಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ' ಎಂದು ಮಾಜಿ ಮುಖ್ಯಮಂತ್ರಿ, ಚನ್ನಪಟ್ಟಣ ಶಾಸಕ ಎಚ್. ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಭಾನುವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಸರ್ಕಾರ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಪಿ ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆದ ಜೆಡಿಎಸ್ ಕಾರ್ಯಕರ್ತರುಸಿಪಿ ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆದ ಜೆಡಿಎಸ್ ಕಾರ್ಯಕರ್ತರು

'ಬಿಜೆಪಿ ಸರಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ಎಂಎಲ್‌ಸಿ ಕೋರಿಕೆ ಮೇರೆಗೆ ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

'ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ಅಡ್ಡಮಾರ್ಗ ಹಿಡಿದಿದ್ದು ಏಕೆ?. ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್‌ ಕಮಲದ ಸರಕಾರ ಮಾಡಿದ್ದು ಯಾಕೆ?. ಇದು ವಾಮಮಾರ್ಗವೋ?, ಸನ್ಮಾರ್ಗವೋ? ಸ್ಪಲ್ಪ ಹೇಳಿ' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಹಳ್ಳ ಹಿಡಿದ 108 ಆ್ಯಂಬುಲೆನ್ಸ್‌ ಸೇವೆ; ಜಿವಿಕೆ ನಿರ್ಲಕ್ಷ್ಯರಾಮನಗರ ಜಿಲ್ಲೆಯಲ್ಲಿ ಹಳ್ಳ ಹಿಡಿದ 108 ಆ್ಯಂಬುಲೆನ್ಸ್‌ ಸೇವೆ; ಜಿವಿಕೆ ನಿರ್ಲಕ್ಷ್ಯ

ಡಾ. ಅಶ್ವಥ್ ನಾರಾಯಣ

ಡಾ. ಅಶ್ವಥ್ ನಾರಾಯಣ

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವಥ್ ನಾರಾಯಣ ಟ್ಯಾಗ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, 'ಅಭಿವೃದ್ಧಿ ಕೆಲಸ ಎಂದರೇನು? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ಕಳ್ಳಮಾರ್ಗದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ರಾಜಮಾರ್ಗ?' ಎಂದು ಪ್ರಶ್ನಿಸಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಪತ್ರಿಗೋಷ್ಠಿ ನಡೆಸಿದ್ದರು

ಎಚ್. ಡಿ. ಕುಮಾರಸ್ವಾಮಿ ಪತ್ರಿಗೋಷ್ಠಿ ನಡೆಸಿದ್ದರು

ಶನಿವಾರ ಎಚ್. ಡಿ. ಕುಮಾರಸ್ವಾಮಿ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ಚನ್ನಪಟ್ಟಣದಲ್ಲಿ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕುರಿತು ಮಾತನಾಡಿದ್ದರು.

"ಹಿಂದಿನ ಮುಖ್ಯಮಂತ್ರಿಯೊಬ್ಬರು ಎಚ್. ಡಿ. ದೇವೇಗೌಡರ ಕುಟುಂಬವನ್ನು ಕೆಣಕಿ ಏನಾದರು ಎಂಬುದನ್ನು ಒಮ್ಮೆ ನೆನೆಪು ಮಾಡಿಕೊಂಡರೆ ಉತ್ತಮ. ಯಾವುದೇ ಕಾರಣಕ್ಕೂ ನನ್ನ ಪಕ್ಷದ ಕಾರ್ಯಕರ್ತರನ್ನು ಕೆರಳಿಸುವ ಪ್ರಯತ್ನ ಮಾಡಬೇಡಿ" ಎಂದು ಹೇಳಿದ್ದರು.

ಹಣ ಯಾರ ಕಿಸೆಗೆ ಹೋಗುತ್ತದೆ?

ಹಣ ಯಾರ ಕಿಸೆಗೆ ಹೋಗುತ್ತದೆ?

"ಸಿ. ಪಿ. ಯೋಗೇಶ್ವರ್ ಕಲಾವಿದರ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಅವರ ಕೋರಿಕೆ ಆಧರಿಸಿ 50 ಕೋಟಿ ಅನುದಾನ ಬಿಡುಗಡೆ ಮಾಡುವುದು ಎಂದರೆ ಏನರ್ಥ?. ಹಣ ಹಣ ಯಾರ ಕಿಸೆಗೆ ಹೋಗಲಿದೆ?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದರು.

"ಎಲ್ಲಾ ಕಾಮಗಾರಿಗಳ ಭೂಮಿ ಪೂಜೆಗೂ ತಾವೇ ಬರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದರು. ಈಗ ಏಕೆ ಬರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ವಿಷಯ ತಿಳಿದಿರಲಿಲ್ಲವೆ?. ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ನಡೆಸಬೇಕಿತ್ತು. ಸಾವಿರಾರು ಮಂದಿ ಪೊಲೀಸರನ್ನು ನಿಯೋಜನೆ ಮಾಡಿಕೊಂಡು ಭೂಮಿ ಪೂಜೆ ಮಾಡುವ ಅಗತ್ಯ ಏನಿತ್ತು?" ಎಂದು ಕುಮಾರಸ್ವಾಮಿ ಕೇಳಿದ್ದರು.

ದೌರ್ಜನ್ಯಕ್ಕೆ ನಾನು ಹೆದರುವುದಿಲ್ಲ

ದೌರ್ಜನ್ಯಕ್ಕೆ ನಾನು ಹೆದರುವುದಿಲ್ಲ

"ಚನ್ನಪಟ್ಟಣದಲ್ಲಿ ಈ ರೀತಿಯ ದೌರ್ಜನ್ಯಕ್ಕೆ ನಾನು ಹೆದರುವುದಿಲ್ಲ. ಭೂಮಿ ಪೂಜೆಗೆ ಜಿಲ್ಲಾ ಉಸ್ತುವಾರಿ ಸಚಿವರು ಏಕೆ ಹೋಗಲಿಲ್ಲ?. ವಿಧಾನ ಪರಿಷತ್‌ನ ನಾಲ್ಕು ಚೇಲಾಗಳನ್ನು ಇಟ್ಟುಕೊಂಡು ಮಾಡುತ್ತೀರಾ?. ಕಾನೂನು ಉಲ್ಲಂಘನೆ ಮಾಡುವವರನ್ನು ಬಂಧಿಸುತ್ತೀರಾ" ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಎಚ್.ಡಿ. ಕುಮಾರಸ್ವಾಮಿ
Know all about
ಎಚ್.ಡಿ. ಕುಮಾರಸ್ವಾಮಿ

English summary
Karnataka former chief minister H. D. Kumaraswamy challenged BJP government for an open debate on Ramanagara development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X