ಬೇಟೆಗೆ ಹೋಗಿದ್ದ ವ್ಯಕ್ತಿಗೆ ಗುಂಡು ತಗುಲಿ ಸಾವು; ಉಯ್ಯಂಬಳ್ಳಿ ಉದ್ವಿಗ್ನ
ರಾಮನಗರ, ಮಾರ್ಚ್ 16: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಉಯ್ಯಂಬಳ್ಳಿ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಬೇಟೆಗೆಂದು ಹೋಗಿದ್ದ ಉಯ್ಯಂಬಳ್ಳಿ ಗ್ರಾಮದ ಯುವಕನೊಬ್ಬ ಆಕಸ್ಮಿಕವಾಗಿ ಗುಂಡು ತಗುಲಿ ಅಸುನೀಗಿದ್ದು, ಉದ್ವಿಗ್ನ ಪರಿಸ್ಥಿತಿಗೆಕಾರಣವಾಗಿದೆ.
ಬೇಟೆಗೆ ಹೋಗಿದ್ದ ಯುವಕನನ್ನು ಅರಣ್ಯಾಧಿಕಾರಿಗಳೇ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಸಜ್ಜಾಗಿದ್ದರು. ಇದರಿಂದ, ಪರಿಸ್ಥಿತಿಯು ಉದ್ವಿಗ್ನಗೊಂಡಿತ್ತು.

ಸ್ಥಳಕ್ಕೆ ಆಗಮಿಸಿದ್ದ ಪೊಲೀಸರ ಮೇಲೂ ಗ್ರಾಮಸ್ಥರು ಹಲ್ಲೆ ನಡೆಸಲು ಮುಂದಾಗಿದ್ದರು. ಆದರೂ, ಹರಸಾಹಸ ಮಾಡಿ ಪೊಲೀಸರು ಜನರನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆದರೂ, ರೊಚ್ಚಿಗೆದ್ದಿರುವ ಗ್ರಾಮಸ್ಥರು, ರಾಮನಗರ- ಸಂಗಮ ರಸ್ತೆಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಸ್ತೆ ತಡೆ ನಡೆಸಿದರು.












Click it and Unblock the Notifications